ಅನ್ನದಾತರ ಕಿಚ್ಚು: ಪ್ರತಿಭಟನೆ ನಿರತ ಕರವೇ ಕಾರ್ಯಕರ್ತರು ಖಾಕಿ ವಶ

|

Updated on: Sep 28, 2020 | 9:59 AM

ಬೆಂಗಳೂರು: ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ವಿರೋಧಿಸಿ ಕರ್ನಾಟಕ ಬಂದ್ ಮಾಡಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ಪ್ರತಿಭಟನೆಯ ಬಿಸಿ ಹೆಚ್ಚಾಗಿದೆ. ಮೆಜೆಸ್ಟಿಕ್ ಹಾಗೂ ಬೆಂಗಳೂರು ರೈಲ್ವೆ ನಿಲ್ದಾಣದ ಬಳಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕರವೇ ನಾರಾಯಣಗೌಡ ನೇತೃತ್ವದಲ್ಲಿ ರೈಲು ತಡೆಗೆ ಕಾರ್ಯಕರ್ತರು ಯತ್ನಿಸಿದ್ದಾರೆ. ಹೀಗಾಗಿ ನಾರಾಯಣಗೌಡ ಹಾಗೂ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಗೂ ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಫ್ರೀಡಂಪಾರ್ಕ್ ಬಳಿ ಬಸ್ ತಡೆದು ಹೈಡ್ರಾಮಾ: ಇನ್ನು ನಾರಾಯಣಗೌಡರನ್ನ ವಶಕ್ಕೆ ಪಡೆದು ತೆರಳುತ್ತಿದ್ದ ಬಸ್ ತಡೆದು […]

ಅನ್ನದಾತರ ಕಿಚ್ಚು: ಪ್ರತಿಭಟನೆ ನಿರತ ಕರವೇ ಕಾರ್ಯಕರ್ತರು ಖಾಕಿ ವಶ
Follow us on

ಬೆಂಗಳೂರು: ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ವಿರೋಧಿಸಿ ಕರ್ನಾಟಕ ಬಂದ್ ಮಾಡಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ಪ್ರತಿಭಟನೆಯ ಬಿಸಿ ಹೆಚ್ಚಾಗಿದೆ.

ಮೆಜೆಸ್ಟಿಕ್ ಹಾಗೂ ಬೆಂಗಳೂರು ರೈಲ್ವೆ ನಿಲ್ದಾಣದ ಬಳಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕರವೇ ನಾರಾಯಣಗೌಡ ನೇತೃತ್ವದಲ್ಲಿ ರೈಲು ತಡೆಗೆ ಕಾರ್ಯಕರ್ತರು ಯತ್ನಿಸಿದ್ದಾರೆ. ಹೀಗಾಗಿ ನಾರಾಯಣಗೌಡ ಹಾಗೂ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಗೂ ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಫ್ರೀಡಂಪಾರ್ಕ್ ಬಳಿ ಬಸ್ ತಡೆದು ಹೈಡ್ರಾಮಾ:
ಇನ್ನು ನಾರಾಯಣಗೌಡರನ್ನ ವಶಕ್ಕೆ ಪಡೆದು ತೆರಳುತ್ತಿದ್ದ ಬಸ್ ತಡೆದು ಕರ್ನಾಟಕ ರಕ್ಷಣ ವೇದಿಕೆ ಕಾರ್ಯಕರ್ತರು ಫ್ರೀಡಂಪಾರ್ಕ್ ಬಳಿ ಪ್ರತಿಭಟನೆ ನಡೆಸಿದ್ರು.

Published On - 7:34 am, Mon, 28 September 20