ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ

Edited By:

Updated on: Mar 22, 2025 | 7:36 PM

ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ನಡೆದ ಪ್ರತಿಭಟನೆಯಲ್ಲಿ ಕರವೇ ಶಿವರಾಮೇಗೌಡ ಬಣದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಎಂಇಎಸ್ ಅಣಕು ಶವಯಾತ್ರೆ ಕೂಡ ಮಾಡಲಾಗಿದೆ. ಈ ವೇಳೆ ಪ್ರತಿಭಟನೆಯಲ್ಲಿ ಎಮ್ಮೆಯೊಂದು ಬೆದರಿ ಓಡಿ ಹೋಗಿರುವಂತಹ ಘಟನೆ ವಿವೇಕಾನಂದ ಸರ್ಕಲ್ ಬಳಿ ನಡೆಯಿತು.

ಧಾರವಾಡ, ವಾರ್ಚ್​ 22: ಕರ್ನಾಟಕ ಬಂದ್ (Karnataka Bandh) ಹಿನ್ನೆಲೆಯಲ್ಲಿ ಧಾರವಾಡದಲ್ಲಿ ನಡೆದ ಪ್ರತಿಭಟನೆಯಲ್ಲಿ ಕರವೇ ಶಿವರಾಮೇಗೌಡ ಬಣದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಎಂಇಎಸ್ ಅಣಕು ಶವಯಾತ್ರೆ ಕೂಡ ಮಾಡಲಾಗಿದೆ. ಈ ವೇಳೆ ಪ್ರತಿಭಟನೆಯಲ್ಲಿ ಎಮ್ಮೆಯೊಂದು ಬೆದರಿ ಓಡಿ ಹೋಗಿರುವಂತಹ ಘಟನೆ ವಿವೇಕಾನಂದ ಸರ್ಕಲ್ ಬಳಿ ನಡೆಯಿತು. ಜನದಟ್ಟಣೆಯಿಂದಾಗಿ ಎಮ್ಮೆ ಓಡಿಹೋಗಿದ್ದು, ನಂತರ ಅದನ್ನು ಪ್ರತಿಭಟನಾಕಾರರು ಹಿಡಿದರು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Mar 22, 2025 04:02 PM
Follow Us
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More