ಕರ್ನಾಟಕ ಬಂದ್​​ ಎಫೆಕ್ಟ್​​: ಬಾಟಲ್​​ ಹಿಡಿದು ಹೋದ್ರೆ ಇಂದು ಬಂಕ್​ಗಳಲ್ಲಿ ಸಿಗಲ್ಲ ಪೆಟ್ರೋಲ್​​!

Updated on: Aug 13, 2026 | 10:42 AM

Karnataka Bandh: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಪೊಲೀಸರು ಪೆಟ್ರೋಲ್ ಬಂಕ್‌ಗಳಿಗೆ ಮಹತ್ವದ ಎಚ್ಚರಿಕೆ ನೀಡಿದ್ದಾರೆ. ಅಹಿತಕರ ಘಟನೆಗಳನ್ನು ತಪ್ಪಿಸುವ ಉದ್ದೇಶದಿಂದ ಬಾಟಲಿಗಳಲ್ಲಿ ಪೆಟ್ರೋಲ್ ನೀಡದಂತೆ ಸೂಚಿಸಲಾಗಿದೆ. ಇದರ ಜೊತೆಗೆ, ಕಾವೇರಿ ನೀರು ಹಂಚಿಕೆ ಕುರಿತಂತೆ ಸುಪ್ರೀಂಕೋರ್ಟ್‌ನಲ್ಲಿ ನಡೆಯಬೇಕಿದ್ದ ಅರ್ಜಿ ವಿಚಾರಣೆ ಮುಂದೂಡಲ್ಪಟ್ಟಿದೆ.

ಬೆಂಗಳೂರು, ಆಗಸ್ಟ್​​ 13: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಅಹಿತಕರ ಘಟನೆಗಳನ್ನು ತಡೆಯುವ ಉದ್ದೇಶದಿಂದ ಪೆಟ್ರೋಲ್ ಬಂಕ್‌ಗಳಿಗೆ ಮಹತ್ವದ ಸೂಚನೆಗಳನ್ನು ನೀಡಲಾಗಿದೆ. ಬಾಟಲಿಗಳಲ್ಲಿ ಪೆಟ್ರೋಲ್ ವಿತರಣೆ ಮಾಡದಂತೆ ಕಟ್ಟುನಿಟ್ಟಾಗಿ ಎಚ್ಚರಿಕೆ ನೀಡಲಾಗಿದೆ. ಬಾಟಲಿಗಳಲ್ಲಿ ಪೆಟ್ರೋಲ್ ನೀಡುವುದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಆತಂಕ ಹಿನ್ನೆಲ ಮಹತ್ವದ ಸೂಚನೆ ನೀಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us