ಕರ್ನಾಟಕ ಬಂದ್​: ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ

Edited By:

Updated on: Mar 20, 2025 | 10:49 PM

ಮಾರ್ಚ್ 22 ರಂದು MES ಮತ್ತು ಶಿವಸೇನೆಯಿಂದ ಬಂದ್ ಹಿನ್ನೆಲೆಯಲ್ಲಿ ಕರ್ನಾಟಕದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ಬಗ್ಗೆ ಶಿಕ್ಷಣ ಸಚಿವರು ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ. ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಅಡ್ಡಿ ಬಂದರೆ ವಿದ್ಯಾರ್ಥಿಗಳಿಗೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ, ಗೃಹ ಇಲಾಖೆಯೊಂದಿಗೆ ಚರ್ಚಿಸಿ ನಾಳೆ ಅಂತಿಮ ತೀರ್ಮಾನ ತೆಗೆದುಕೊಳ್ಳುವುದಾಗಿ ಸಚಿವರು ತಿಳಿಸಿದ್ದಾರೆ.

ಬೆಂಗಳೂರು, ಮಾರ್ಚ್​ 20: ಎಂಇಎಸ್​, ಶಿವಸೇನೆ ಪುಂಡಾಟ ಖಂಡಿಸಿ ಮಾರ್ಚ್ 22ರಂದು ಕರ್ನಾಟಕ ಬಂದ್ (Karnataka Bandh)​ ಹಿನ್ನೆಲೆ ಶಾಲಾ-ಕಾಲೇಜುಗಳ ರಜೆ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ. ನಾಳೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಟಿವಿ9ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶನಿವಾರ ಎಸ್ಎಸ್​ಎಲ್​ಸಿ ಪರೀಕ್ಷೆ ಇಲ್ಲ. ಸಾರ್ವಜನಿಕ ವಾಹನ ಇಲ್ಲದೆ ಇದ್ದರೆ ಮಕ್ಕಳಿಗೆ ತೊಂದರೆ ಆಗುತ್ತೆ. ಗೃಹ ಇಲಾಖೆ ಜೊತೆ ಚರ್ಚೆ ನಡೆಸಿ ನಾಳೆ‌ ತೀರ್ಮಾನ ಮಾಡುತ್ತೇವೆ. ಬಂದ್​ಗೆ ಸಾರಿಗೆ ಬೆಂಬಲ ಕೊಟ್ಟರೆ ಮಕ್ಕಳಿಗೆ ತೊಂದರೆ ಆಗುತ್ತದೆ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More