ಕರ್ನಾಟಕ ಬಂದ್: ನಾಳೆ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ? ಸಚಿವರು ಕೊಟ್ಟ ಮಾಹಿತಿ ಇಲ್ಲಿದೆ
ಕನ್ನಡ ಪರ ಸಂಘಟನೆಗಳು ಮಾರ್ಚ್ 22 ರಂದು ಕರ್ನಾಟಕ ಬಂದ್ಗೆ ಕರೆ ಕೊಟ್ಟಿದ್ದು, ಕೆಎಸ್ಆರ್ಟಿಸಿ, ಬಿಎಂಟಿಸಿ ನೌಕರರ ಸಂಘ ಕೂಡ ಬಂದ್ಗೆ ಬೆಂಬಲ ವ್ಯಕ್ತಪಡಿಸಿವೆ. ಹಾಗಾದರೆ, ಕೆಎಸ್ಆರ್ಟಿಸಿ, ಬಿಎಂಟಿಸಿ ಸಂಚಾರ ಇರುತ್ತಾ? ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು? ವಿಡಿಯೋ ಇಲ್ಲಿದೆ ನೋಡಿ.
ಬೆಂಗಳೂರು, ಮಾರ್ಚ್ 21: ಶನಿವಾರದ ಕರ್ನಾಟಕ ಬಂದ್ಗೆ ಕರ್ನಾಟಕ ಸಾರಿಗೆ ನೌಕರರ ಒಕ್ಕೂಟ, ಕೆಎಸ್ಆರ್ಟಿಸಿ, ಬಿಎಂಟಿಸಿ ನೌಕರರ ಸಂಘ ಈಗಾಗಲೇ ಬೆಂಬಲ ಘೋಷಿಸಿವೆ. ಇದರಿಂದಾಗಿ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ ಎಂಬ ಪ್ರಶ್ನೆ ಉದ್ಭವಿಸಿದೆ. ಈ ವಿಚಾರವಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾಹಿತಿ ನೀಡಿದ್ದಾರೆ. ಅವರು ಹೇಳಿದ್ದೇನೆಂಬುದನ್ನು ವಿಡಿಯೋದಲ್ಲಿ ನೋಡಿ.
Published on: Mar 21, 2025 01:54 PM
Latest Videos