36 ಸಾವಿರ ಕೋಟಿ ರೂ. ಲೂಟಿ ಆರೋಪ: ರಾಜ್ಯಪಾಲರಾಯ್ತು ಈಗ ಲೋಕಾಯುಕ್ತಕ್ಕೂ ಬಿಜೆಪಿ ದೂರು
ಬೆಂಗಳೂರಿನ ಕಸದ ಟೆಂಡರ್ನಲ್ಲಿ ಅಕ್ರಮವೆಸಗಲಾಗಿದೆ ಎಂದು ಆರೋಪಿಸಿ ಕರ್ನಾಟಕ ಬಿಜೆಪಿ ಆರೋಪ ಮಾಡಿದೆ. ಈ ಸಂಬಂಧ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಈಗಾಗಲೇ ರಾಜ್ಯಪಾಲರಿಗೆ ದೂರು ನೀಡಿದ್ದು, ಸಿಬಿಐ ತನಿಗೆ ಮನವಿ ಮಾಡಿದೆ. ಇದರ ಬೆನ್ನಲ್ಲೇ ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ಲೋಕಾಯುಕ್ತಕ್ಕೂ ದೂರು ನೀಡಿದೆ.
ಬೆಂಗಳೂರು, (ಜೂನ್ 10): ಬೆಂಗಳೂರಿನ ಕಸದ ಟೆಂಡರ್ನಲ್ಲಿ ಅಕ್ರಮವೆಸಗಲಾಗಿದೆ ಎಂದು ಆರೋಪಿಸಿ ಕರ್ನಾಟಕ ಬಿಜೆಪಿ ಆರೋಪ ಮಾಡಿದೆ. ಈ ಸಂಬಂಧ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಈಗಾಗಲೇ ರಾಜ್ಯಪಾಲರಿಗೆ ದೂರು ನೀಡಿದ್ದು, ಸಿಬಿಐ ತನಿಗೆ ಮನವಿ ಮಾಡಿದೆ. ಇದರ ಬೆನ್ನಲ್ಲೇ ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ಲೋಕಾಯುಕ್ತಕ್ಕೂ ದೂರು ನೀಡಿದೆ. 36 ಸಾವಿರ ಕೋಟಿ ರೂಪಾಯಿಯ ಬೆಂಗಳೂರು ಕಸದ ಟೆಂಡರ್ ನಲ್ಲಿ ಬರೋಬ್ಬರಿ 10 ಸಾವಿರ ಕೋಟಿ ರೂ. ಕಿಕ್‌ಬ್ಯಾಕ್ ಪಡೆಯಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಶಾಸಕ ಧೀರಜ್ ಮುನಿರಾಜು ದೂರು ನೀಡಿದ್ದು,ಅಕ್ರಮದ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.
ಇದನ್ನೂ ನೋಡಿ: ಏನಿದು ಕಸದಿಂದ ಕಾಸು? ಬಹುದೊಡ್ಡ ಹಗರಣವನ್ನ ಎಳೆ ಎಳೆಯಾಗಿ ಬಿಚ್ಚಿಟ್ಟ ಆರ್ ಅಶೋಕ್
Loading...
Unable to load recommendations.
Follow Us
