2028ರ ಚುನಾವಣೆ ಗೆಲ್ಲಲು ಬಿಜೆಪಿ ಭರ್ಜರಿ ಪ್ಲ್ಯಾನ್:ಬಳ್ಳಾರಿ ಪಾದಯಾತ್ರೆ ಯಶಸ್ಸಿನ ಬೆನ್ನಲ್ಲೇ ಮತ್ತೊಂದು ಯಾತ್ರೆ

Updated on: Sep 25, 2026 | 10:11 PM

2028ರ ವಿಧಾನಸಭೆ ಚುನಾವಣೆ ಗೆಲ್ಲಲು ಆಡಳಿತರೂಢ ಕಾಂಗ್ರೆಸ್​ ಹಲವು ತಂತ್ರಗಾರಿಕೆ ಹೆಣೆಯುತ್ತಿದ್ದರೆ, ಇನ್ನೊಂದೆಡೆ ಬಿಜೆಪಿ 2028ರ ಚುನಾವಣೆಯಲ್ಲಿ ಗೆದ್ದು ಅಧಿಕಾರಿಕ್ಕೇರಬೇಕೆಂದು ಈಗಗಿನಿಂದಲೇ ಭರ್ಜರಿ ಪ್ಲ್ಯಾನ್ ಮಾಡಿದೆ. ಹೌದು...ಬೂತ್​ ಮಟ್ಟದಿಂದಲೇ ಮತಬೇಟೆ ಆರಂಭಿಸಿದ ವಿಪಕ್ಷ ಬಿಜೆಪಿ, ಬಳ್ಳಾರಿ ಚಲೋ ಯಶಸ್ವಿ ಬಳಿಕ ಮತ್ತೊಂದು ಯಾತ್ರೆಗೆ ಸಜ್ಜಾಗಿದ್ದು, ಬೂತ್ ವಿಜಯ ಸಂಕಲ್ಪ ಯಾತ್ರೆ ಆರಂಭಿಸಲು ಮುಂದಾಗಿದೆ.

ಬೆಂಗಳೂರು, ಸೆಪ್ಟೆಂಬರ್ 25): 2028ರ ವಿಧಾನಸಭೆ ಚುನಾವಣೆ ಗೆಲ್ಲಲು ಆಡಳಿತರೂಢ ಕಾಂಗ್ರೆಸ್​ ಹಲವು ತಂತ್ರಗಾರಿಕೆ ಹೆಣೆಯುತ್ತಿದ್ದರೆ, ಇನ್ನೊಂದೆಡೆ ಬಿಜೆಪಿ 2028ರ ಚುನಾವಣೆಯಲ್ಲಿ ಗೆದ್ದು ಅಧಿಕಾರಿಕ್ಕೇರಬೇಕೆಂದು ಈಗಗಿನಿಂದಲೇ ಭರ್ಜರಿ ಪ್ಲ್ಯಾನ್ ಮಾಡಿದೆ. ಹೌದು…ಬೂತ್​ ಮಟ್ಟದಿಂದಲೇ ಮತಬೇಟೆ ಆರಂಭಿಸಿದ ವಿಪಕ್ಷ ಬಿಜೆಪಿ, ಬಳ್ಳಾರಿ ಚಲೋ ಯಶಸ್ವಿ ಬಳಿಕ ಮತ್ತೊಂದು ಯಾತ್ರೆಗೆ ಸಜ್ಜಾಗಿದ್ದು, ಬೂತ್ ವಿಜಯ ಸಂಕಲ್ಪ ಯಾತ್ರೆ ಆರಂಭಿಸಲು ಮುಂದಾಗಿದೆ. ಹೌದು….ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಅಕ್ಟೋಬರ್ 1ರಿಂದ 10 ದಿನ ಬೂತ್ ವಿಜಯ ಸಂಕಲ್ಪ ಯಾತ್ರೆ ನಡೆಯಲಿದ್ದು, ಕೋಲಾರದ ಕುರುಡುಮಲೆಯಿಂದ ವಿವಿಧ ಜಿಲ್ಲೆಗಳತ್ತ ಈ ಸಂಕಲ್ಪ ಯಾತ್ರೆ ಸಾಗಲಿದೆ. 90 ದಿನದೊಳಗೆ 224 ವಿಧಾನಸಭಾ ಕ್ಷೇತ್ರದಾದ್ಯಂತ ಯಾತ್ರೆಯ ಗುರಿ ಹೊಂದಿದ್ದು, ಮೊದಲ ಹಂತದಲ್ಲಿ‌ 16 ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಯಾತ್ರೆ ನಡೆಯಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More