ನವೆಂಬರ್​ನಲ್ಲಿ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ: ವಿಜಯೇಂದ್ರ ಭವಿಷ್ಯ

Edited By:

Updated on: Oct 05, 2025 | 12:55 PM

ರಾಜ್ಯ ರಾಜಕೀಯದಲ್ಲಿ ನವೆಂಬರ್​ ಕ್ರಾಂತಿ ಆಗಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಡಿಸಿಎಂ ಡಿಕೆಶಿ ಮತ್ತು ಸಿಎಂ ಸಿದ್ದರಾಮಯ್ಯ ನಡೆ ಒಂದೊಂದಾದರೆ ಇತ್ತ ಶಾಸಕರ ನಡೆ ಬೇರೆಯದ್ದೇ ಇದೆ. ಹಾಗಾಗಿ ರಾಜಕೀಯವಾಗಿ ಒಂದಷ್ಟು ಬದಲಾವಣೆ ಆಗಲಿದೆ ಎಂದಿದ್ದಾರೆ.

ಮೈಸೂರು, ಅಕ್ಟೋಬರ್​ 05: ನವೆಂಬರ್​ನಲ್ಲಿ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವಾಗಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಭವಿಷ್ಯ ನುಡಿದಿದ್ದಾರೆ.  ಸಿಎಂ ಸಿದ್ದರಾಮಯ್ಯ ನಡೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಡೆ ಇದೆ. ಡಿ.ಕೆ.ಶಿವಕುಮಾರ್ ನಡೆ ಸಿದ್ದರಾಮಯ್ಯ ಕಡೆ ಇದೆ. ಆದರೆ ಶಾಸಕರ ನಡೆ ಬೇರೆ ಕಡೆ ಇದೆ ಎಂದು ವಿಜಯೇಂದ್ರ ಹೇಳಿದ್ದಾರೆ. ಇನ್ನು ರಾಜಕೀಯ ಅಲ್ಲೋಲ ಕಲ್ಲೋಲವಾದಾಗ ಬಿಜೆಪಿ ನಡೆ ವಿಚಾರದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಸಮರ್ಥ ಪ್ರತಿಪಕ್ಷವಾಗಿ ಕೆಲಸ ಮಾಡಲಿದೆ. ರಾಜಕೀಯ ಅವಕಾಶ ಬಂದರೆ ಆಗ ನೋಡೋಣ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Oct 05, 2025 12:35 PM