ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ: ವಿಧಾನಸಭೆ ಎಲೆಕ್ಷನ್​ ಸೋಲಿನ ಬಳಿಕ 2 ಮಹತ್ವದ ಸಭೆ ಕರೆದ ಬಿಜೆಪಿ

| Updated By: ರಮೇಶ್ ಬಿ. ಜವಳಗೇರಾ

Updated on: Sep 07, 2023 | 11:18 AM

ರಾಜ್ಯ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ತಾಲೀಮು ನಡೆಸಿದ್ದು, ಪದಾಧಿಕಾರಿಗಳ ಮತ್ತು ಕಾರ್ಯಕಾರಿಣಿ ಸಭೆ ಕರೆದಿದೆ. ಸೆಪ್ಟೆಂಬರ್ ​12 ರಂದು ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ನಡೆದರೆ, ಸೆಪ್ಟೆಂಬರ್18 ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ವಿಧಾನಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಭೆ ಕರೆದಿದ್ದು, ಸಂಚಲನ ಮೂಡಿಸಿದೆ.

ಬೆಂಗಳೂರು, (ಸೆಪ್ಟೆಂಬರ್ 07): ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್​ ಲೋಕಸಭಾ ಚುನಾವಣೆಯನ್ನು ಎದುರು ನೋಡುತ್ತಿದ್ದು, ಈಗಿನಿಂದಲೇ ಭರ್ಜರಿ ತಯಾರಿ ಆರಂಭಿಸಿವೆ. ಸದ್ಯ ಕೈ ನಾಯಕರು ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನವನ್ನು ಗೆಲ್ಲಲು ಎಲ್ಲಾ ಪ್ರಯತ್ನವನ್ನ ಮಾಡುತ್ತಿದ್ದಾರೆ. ಆಪರೇಷನ್ ಹಸ್ತ ಮಾಡುವ ಮೂಲಕ ಬಿಜೆಪಿ ಮತ್ತು ಜೆಡಿಎಸ್ ಗೆ ಟಕ್ಕರ್ ನೀಡಲು ಕಮಲ ದಳ ನಾಯಕರಿಗೆ ಗಾಳ ಹಾಕುವ ಕೆಲಸ ತೆರೆಮರೆಯಲ್ಲಿ ಮುಂದುವರಿಸಿದ್ದಾರೆ.

ಮತ್ತೊಂದೆಡೆ ರಾಜ್ಯ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ತಾಲೀಮು ನಡೆಸಿದ್ದು, ಪದಾಧಿಕಾರಿಗಳ ಮತ್ತು ಕಾರ್ಯಕಾರಿಣಿ ಸಭೆ ಕರೆದಿದೆ. ಸೆಪ್ಟೆಂಬರ್ ​12 ರಂದು ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ನಡೆದರೆ, ಸೆಪ್ಟೆಂಬರ್18 ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ವಿಧಾನಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಭೆ ಕರೆದಿದ್ದು, ಸಂಚಲನ ಮೂಡಿಸಿದೆ.