AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್

ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Aug 16, 2026 | 6:17 PM

Share

ಉದ್ದೇಶಪೂರ್ವಕವಾಗಿ ಶಾಂತಿಭಂಗ ಮಾಡಿದ್ದಾರೆ ಎಂದು ಆರೋಪಿಸಿ ಮಂಗಳೂರು ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಎಂಬುವರು ಸೋನಿಯಾ ಗಾಂಧಿ ವಿರುದ್ಧ ಉರ್ವಾ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ವಿಕಾಸ್, 'ವಂದೇ ಮಾತರಂ' ನಮ್ಮ ರಾಷ್ಟ್ರಗೀತೆಯಾದ 'ಜನ ಗಣ ಮನ'ಕ್ಕೆ ಸಮಾನವಾಗಿದೆ. ಯಾರೇ ಆಗಲಿ ಅವರ ಹುದ್ದೆ ಅಥವಾ ಅಧಿಕಾರ ಏನೇ ಇರಲಿ ಇದನ್ನು ಅವಮಾನಿಸಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಆದ್ದರಿಂದ, ಸೋನಿಯಾ ಗಾಂಧಿ ವಿರುದ್ಧ ದಂಡನಾತ್ಮಕ ಕ್ರಮ ಕೈಗೊಳ್ಳುವಂತೆ ಮತ್ತು ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ನಾನು ಉರ್ವ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ನೀಡಿದ್ದೇನೆ' ಎಂದಿದ್ದಾರೆ.

ಮಂಗಳೂರು.ನವದೆಹಲಿ, (ಆಗಸ್ಟ್ 16): ನವದೆಹಲಿಯಲ್ಲಿರುವ ಕಾಂಗ್ರೆಸ್ (Congress) ಪ್ರಧಾನ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ (Independence Day) ಕಾರ್ಯಕ್ರಮದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಬೆನ್ನಲ್ಲೇ ಹೊಸ ರಾಜಕೀಯ ವಿವಾದ ಸೃಷ್ಟಿಯಾಗಿದೆ. ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ (Vande Mataram) ಗಾಯನವನ್ನು ನಿಲ್ಲಿಸುವಂತೆ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಕಾರ್ಯಕರ್ತರಿಗೆ ಸನ್ನೆ ಮಾಡುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ರಾಷ್ಟ್ರಗೀತೆಗೆ ನೀಡುವ ಗೌರವವನ್ನೇ ವಂದೇ ಮಾತರಂ ಗೀತೆಗೂ ನೀಡಬೇಕೆಂಬ ನಿಯಮವಿದ್ದರೂ ಸೋನಿಯಾ ಗಾಂಧಿ ವಂದೇ ಮಾತರಂ ಗೀತೆ ಪ್ಲೇ ಆಗುತ್ತಿದ್ದಂತೆ ಕಾರ್ಯಕರ್ತರ ಬಳಿ ಬಿಸಿಬಿಸಿ ಚರ್ಚೆ ನಡೆಸುತ್ತಿರುವುದನ್ನು ವಿಡಿಯೋದಲ್ಲಿದ್ದು, ಇದೀಗ ಇದನ್ನೇ ಇಟ್ಟುಕೊಂಡು ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಮುಗಬಿದ್ದಿದ್ದಾರೆ. ಅಲ್ಲದೇ ಈ ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ಮುಖಂಡ ದೂರು ದಾಖಲಿಸಿದ್ದಾರೆ.

ಉದ್ದೇಶಪೂರ್ವಕವಾಗಿ ಶಾಂತಿಭಂಗ ಮಾಡಿದ್ದಾರೆ ಎಂದು ಆರೋಪಿಸಿ ಮಂಗಳೂರು ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಎಂಬುವರು ಸೋನಿಯಾ ಗಾಂಧಿ ವಿರುದ್ಧ ಉರ್ವಾ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ವಿಕಾಸ್, ‘ವಂದೇ ಮಾತರಂ’ ನಮ್ಮ ರಾಷ್ಟ್ರಗೀತೆಯಾದ ‘ಜನ ಗಣ ಮನ’ಕ್ಕೆ ಸಮಾನವಾಗಿದೆ. ಯಾರೇ ಆಗಲಿ ಅವರ ಹುದ್ದೆ ಅಥವಾ ಅಧಿಕಾರ ಏನೇ ಇರಲಿ ಇದನ್ನು ಅವಮಾನಿಸಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಆದ್ದರಿಂದ, ಸೋನಿಯಾ ಗಾಂಧಿ ವಿರುದ್ಧ ದಂಡನಾತ್ಮಕ ಕ್ರಮ ಕೈಗೊಳ್ಳುವಂತೆ ಮತ್ತು ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ನಾನು ಉರ್ವ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ನೀಡಿದ್ದೇನೆ’ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 16, 2026 06:16 PM

Follow Us