ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು

Edited By:

Updated on: Mar 11, 2026 | 10:15 PM

ವಿವಾದಿತ ಕಥಾಹಂದರ ಹೊಂದಿದೆ ಎಂಬ ಕಾರಣಕ್ಕೆ ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಈಗ ಈ ಸಿನಿಮಾವನ್ನು ಬಿಜೆಪಿಯ ಕೆಲವು ಶಾಸಕರು ವೀಕ್ಷಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಮಂತ್ರಿಮಾಲ್​​ನಲ್ಲಿ ಸಿನಿಮಾ ವೀಕ್ಷಣೆ ಮಾಡಲಾಗಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..

ವಿವಾದಿತ ಕಥಾಹಂದರ ಹೊಂದಿದೆ ಎಂಬ ಕಾರಣಕ್ಕೆ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಈಗ ಈ ಸಿನಿಮಾವನ್ನು ಬಿಜೆಪಿಯ ಕೆಲವು ಶಾಸಕರು ವೀಕ್ಷಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಮಂತ್ರಿಮಾಲ್​​ನಲ್ಲಿ ಸಿನಿಮಾ ವೀಕ್ಷಣೆ ಮಾಡಲಾಗಿದೆ. ವಿಪಕ್ಷ ನಾಯಕರಾದ ಆರ್. ಅಶೋಕ್ (R Ashok), ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿ ಶಾಸಕರು ಮತ್ತು ಪರಿಷತ್ ಸದಸ್ಯರು ಸಿನಿಮಾ ನೋಡಿದ್ದಾರೆ. ರಾಜ್ಯ ಬಿಜೆಪಿಯಿಂದ ಸಿನಿಮಾ ವೀಕ್ಷಣೆಗಾಗಿ ವ್ಯವಸ್ಥೆ ಮಾಡಲಾಗಿತ್ತು. ಈ ಸಿನಿಮಾಗೆ ಕಾಮಾಕ್ಯ ನಾರಾಯಣ್ ಸಿಂಗ್ ಅವರು ನಿರ್ದೇಶನ ಮಾಡಿದ್ದಾರೆ. ವಿಪುಲ್ ಅಮೃತ್​ಲಾಲ್ ಶಾ ಅವರು ಬಂಡವಾಳ ಹೂಡಿದ್ದಾರೆ. ಈ ಸಿನಿಮಾದಿಂದ ಕೇರಳ ರಾಜ್ಯದ ಘನತೆಗೆ ಧಕ್ಕೆ ಆಗಿದೆ ಎಂದು ಹಲವರು ಕೋರ್ಟ್ ಮೆಟ್ಟಿಲು ಏರಿದ್ದರು. ಆದ್ದರಿಂದ ಬಿಡುಗಡೆಗೂ ಮುನ್ನ ಈ ಸಿನಿಮಾ ಸಾಕಷ್ಟು ವಿವಾದ ಸೃಷ್ಟಿಮಾಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More