ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟಕ್ಕೆ ಸಿದ್ಧತೆ

Updated on: Aug 21, 2026 | 3:38 PM

ವಾಲ್ಮೀಕಿ ಹಗರಣದ ಆರೋಪಿಯಾಗಿರುವ ಸಚಿವ ನಾಗೇಂದ್ರ (B Nagendra) ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿವೆ. ವಿಧಾನಸಭೆ ಹಾಗೂ ಪರಿಷತ್ ಕಲಾಪದಲ್ಲೂ ಸಹ ಬಿಜೆಪಿ (BJP) ಹಾಗೂ ಜೆಡಿಎಸ್ ಸದಸ್ಯರು ಪ್ರತಿಭಟನೆ ನಡೆಸಿ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸುತ್ತಲೇ ಇದ್ದಾರೆ. ಅಲ್ಲದೇ ರಾಜ್ಯದ ಹಲವು ಜಿಲ್ಲೆಗಳಲ್ಲೂ ಬಿಜೆಪಿ ಪ್ರತಿಭಟನೆಗಳನ್ನು ನಡೆಸುತ್ತಿದೆ. ಇಷ್ಟಕ್ಕೆ ಬಿಡದ ಬಿಜೆಪಿ ಪ್ರತಿಭಟನೆಯನ್ನು ತೀವ್ರಗೊಳಿಸಲು ಮತ್ತೊಂದು ಹೋರಾಟಕ್ಕೆ ಸಿದ್ಧತೆ ನಡೆಸಿದ್ದಾರೆ. ಹೌದು....ದಾವಣಗೆರೆ ಜಿಲ್ಲೆ ಜಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆಗೆ BJP ಮುಂದಾಗಿದೆ.

ಬೆಂಗಳೂರು, (ಆಗಸ್ಟ್ 21): ವಾಲ್ಮೀಕಿ ಹಗರಣದ ಆರೋಪಿಯಾಗಿರುವ ಸಚಿವ ನಾಗೇಂದ್ರ (B Nagendra) ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿವೆ. ವಿಧಾನಸಭೆ ಹಾಗೂ ಪರಿಷತ್ ಕಲಾಪದಲ್ಲೂ ಸಹ ಬಿಜೆಪಿ (BJP) ಹಾಗೂ ಜೆಡಿಎಸ್ ಸದಸ್ಯರು ಪ್ರತಿಭಟನೆ ನಡೆಸಿ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸುತ್ತಲೇ ಇದ್ದಾರೆ. ಅಲ್ಲದೇ ರಾಜ್ಯದ ಹಲವು ಜಿಲ್ಲೆಗಳಲ್ಲೂ ಬಿಜೆಪಿ ಪ್ರತಿಭಟನೆಗಳನ್ನು ನಡೆಸುತ್ತಿದೆ. ಇಷ್ಟಕ್ಕೆ ಬಿಡದ ಬಿಜೆಪಿ ಪ್ರತಿಭಟನೆಯನ್ನು ತೀವ್ರಗೊಳಿಸಲು ಮತ್ತೊಂದು ಹೋರಾಟಕ್ಕೆ ಸಿದ್ಧತೆ ನಡೆಸಿದ್ದಾರೆ. ಹೌದು….ದಾವಣಗೆರೆ ಜಿಲ್ಲೆ ಜಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆಗೆ BJP ಮುಂದಾಗಿದೆ. ಸುಮಾರು 170 ಕಿ.ಮೀ. ದೂರ, 20 ದಿನಗಳ ಕಾಲದ ರೂಪರೇಷೆ ಸಿದ್ಧತೆ ನಡೆಸಿದ್ದು, ಈ ಪಾದಯಾತ್ರೆ, 11 ವಿಧಾನಸಭಾ ಕ್ಷೇತ್ರಗಳನ್ನು ಹಾದು ಹೋಗಲಿದೆ. ಮುಂದಿನ ವಾರದಿಂದಲೇ ಪಾದಯಾತ್ರೆ ಆರಂಭವಾಗುವ ಸಾಧ್ಯತೆ ಇದ್ದು, ಬಿಜೆಪಿಯ ಅಹಿಂದ ನಾಯಕರೆಲ್ಲರೂ ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 21, 2026 03:38 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More