ಜೆಡಿಎಸ್-ಬಿಜೆಪಿ ನಾಯಕರ ಸಭೆ ಬಳಿಕ ಮಹತ್ವದ ಸುದ್ದಿಗೋಷ್ಠಿಯ ನೇರಪ್ರಸಾರ
ಬಿಜೆಪಿ ರಾಜ್ಯಾಧ್ಯಕ್ಷರು ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಬೆಂಗಳೂರಿನಲ್ಲಿಂದು ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದು, ಇದರ ನೇರಪ್ರಸಾರ ಇಲ್ಲಿದೆ ನೋಡಿ.
ಬೆಂಗಳೂರು, (ಜುಲೈ 28): ಕರ್ನಾಟಕ ರಾಜ್ಯರಾಜಕಾರಣದಲ್ಲಿ ಮಹತ್ವದ ವಿದ್ಯಮಾನಗಳು ನಡೆಯುತ್ತಿವೆ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ದ್ವೇಷದ ರಾಜಕಾರಣದ ನಡೆದಂತೆ ಕಾಣುತ್ತಿದೆ. ಒಂದೆಡೆ ಕಾಂಗ್ರೆಸ್ ಸರ್ಕಾರದ ಹಗರಣ ವಿರುದ್ಧ ವಿಪಕ್ಷಗಳಾದ ಜೆಡಿಎಸ್ ಮತ್ತು ಬಿಜೆಪಿ ಜಂಟಿಯಾಗಿ ಮುಗಿಬಿದ್ದಿದ್ದರೆ, ಇತ್ತ ಕಾಂಗ್ರೆಸ್ ಸರ್ಕಾರ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಾದ ಹಗರಣಗಳನ್ನು ಎತ್ತಲು ಮುಂದಾಗಿದೆ. ಇದರ ಮಧ್ಯ ಈ ಬಾರಿಯ ಕೇಂದ್ರ ಬಜೆಟ್ನಲ್ಲಿ ಕರ್ನಾಟಕ್ಕೆ ಏನು ಕೊಟ್ಟಿ ಎಂದು ಕಾಂಗ್ರೆಸ್, ಬಿಜೆಪಿ ಮೇಲೆ ಮುಗಿಬಿದ್ದಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯ ಇದೀಗ ವಿಪಕ್ಷಗಳು ಸರ್ಕಾರದ ಹಗರಣದ ವಿರುದ್ಧ ಹೇಗೆಲ್ಲಾ ಧ್ವನಿ ಎತ್ತಬೇಕೆಂದು ತಂತ್ರರೂಪಿಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಮೇಲೆ ಕೇಳಿಬಂದಿರುವ ಮುಡಾ ಹಗರಣ ಹಿಡಿದುಕೊಂಡು ಮೈಸೂರಿಗೆ ಪಾದಯಾತ್ರೆ ಮಾಡಬೇಕೆಂಬ ಚಿಂತನೆ ನಡೆಸಿದೆ. ಈ ಸಂಬಂಧ ಈಗಾಗಲೇ ಮಾತುಕತೆಗಳು ಆಗಿದ್ದು, ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಬಿಜೆಪಿ ರಾಜ್ಯಾಧ್ಯಕ್ಷರು ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತಸ್ರಾವವಾಗಿದೆ. ಇದರಿಂದ ಅವರನ್ನು ಕೂಡಲೇ ಆಸ್ಪತ್ರಗೆ ಕರೆದುಕೊಂಡು ಹೋಗಲಾಗಿದ್ದು, ಯಡಿಯೂರಪ್ಪ ಸೇರಿದಂತೆ ಇತರೆ ನಾಯಕರು ಸುದ್ದಿಗೋಷ್ಠಿ ಮುಂದುವರಿಸಿದ್ದು, ಅದರ ನೇರಪ್ರಸಾರ ಇಲ್ಲಿದೆ ನೋಡಿ.