ರಾಜ್ಯಾಧ್ಯಕ್ಷ ರೇಸ್ನಲ್ಲಿ ಸೋಮಣ್ಣ ಇದ್ದಾರಾ? ಸಿದ್ದೇಶ್ವರ್ ಏನಂದ್ರು ನೋಡಿ
ಕರ್ನಾಟಕ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಆಯ್ಕೆಗೆ ತೀವ್ರ ಪೈಪೋಟಿ ನಡೆಯುತ್ತಿದೆ. ಬಿ.ವೈ. ವಿಜಯೇಂದ್ರ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಎರಡು ಬಣಗಳು ದೆಹಲಿಗೆ ತೆರಳಿ ತಮ್ಮ ಅಭಿಪ್ರಾಯಗಳನ್ನು ವರಿಷ್ಠರ ಮುಂದಿಟ್ಟಿವೆ. ವಿ. ಸೋಮಣ್ಣ ಅವರನ್ನು ಅಧ್ಯಕ್ಷರನ್ನಾಗಿ ಮಾಡುವ ಊಹಾಪೋಹಗಳು ಹಬ್ಬುತ್ತಿವೆ. ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ್ ಅವರು ವರಿಷ್ಠರ ನಿರ್ಧಾರವೇ ಅಂತಿಮ ಎಂದು ಹೇಳಿದ್ದಾರೆ.
ರಾಜ್ಯಾಧ್ಯಕ್ಷ ವಿಚಾರವಾಗಿ ಕರ್ನಾಟಕ ಬಿಜೆಪಿಯಲ್ಲಿ ಬಣ ಬಡಿದಾಟ ನಡೆಯುತ್ತಿದೆ. ಶಾಸಕ ಬಿವೈ ವಿಜಯೇಂದ್ರ ಒಂದು ಬಣವಾದರೇ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಂದು ಬಣವಾಗಿದೆ. ಎರಡೂ ಬಣಗಳು ದೆಹಲಿಗೆ ತೆರಳಿದ್ದು, ರಾಜ್ಯಾಧ್ಯಕ್ಷರು ಯಾರಾಗಬೇಕೆಂಬಹುದರ ಕುರಿತು ತಮ್ಮ ತಮ್ಮ ಅಹವಾಲನ್ನು ವರಿಷ್ಠರ ಮುಂದೆ ಇಟ್ಟಿದ್ದಾರೆ. ಈ ನಡುವೆ, ಬಿಜೆಪಿಯ ಹಿರಿಯ ನಾಯಕ ಕೇಂದ್ರ ಸಚಿವ ವಿ ಸೋಮಣ್ಣ ರಾಜ್ಯಾಧ್ಯಕ್ಷ ಆಗುತ್ತಾರೆ ಎಂಬ ವಂದತಿಗಳು ಹರಿದಾಡುತ್ತಿವೆ. ಈ ಕುರಿತು ದಾವಣಗೆರೆಯಲ್ಲಿ ಮಾತನಾಡಿದ ಮಾಜಿ ಸಂಸದ ಜಿಎಂ ಸಿದ್ದೇಶ್ವರ್, ರಾಜ್ಯಾಧ್ಯಕ್ಷರ ಆಯ್ಕೆಯಲ್ಲಿ ವರಿಷ್ಠರ ನಿರ್ಧಾರವೇ ಅಂತಿಮ ಎಂದು ಜಾರಿಕೊಂಡರು.