BJP Core Committee Meeting: ಕಾಂಗ್ರೆಸ್ನ ಆಪರೇಷನ್ ಹಸ್ತಕ್ಕೆ ಪರ್ಯಾಯವಾಗಿ ಮಹತ್ವದ ನಿರ್ಧಾರ ಕೈಗೊಂಡ ಬಿಜೆಪಿ
ಒಂದು ಕಡೆ ಕಾಂಗ್ರೆಸ್ (Congress) ಆಪರೇಷನ್ ಆಟ ಶುರು ಮಾಡಿದ್ರೆ, ಇತ್ತ ಬಿಜೆಪಿ (BJP) ಅದನ್ನು ದೊಡ್ಡ ಮಟ್ಟದಲ್ಲಿ ತಡೆಯುತ್ತೆ ಎನ್ನುವ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದ್ರೆ ನಿನ್ನೆ(ಆಗಸ್ಟ್ 21) ನಡೆದ ಬಿಜೆಪಿ ಕೋರ್ಕಮಿಟಿ ಸಭೆಯಲ್ಲಿ ಆದ ಚರ್ಚೆ, ನಾಯಕರ ಮನಸ್ಥಿತಿ ಬೇರೆಯದ್ದನ್ನೇ ಹೇಳುತ್ತಿದೆ
ಬೆಂಗಳೂರು, (ಆಗಸ್ಟ್ 22): ಒಂದು ಕಡೆ ಕಾಂಗ್ರೆಸ್ (Congress) ಆಪರೇಷನ್ ಆಟ ಶುರು ಮಾಡಿದ್ರೆ, ಇತ್ತ ಬಿಜೆಪಿ (BJP) ಅದನ್ನು ದೊಡ್ಡ ಮಟ್ಟದಲ್ಲಿ ತಡೆಯುತ್ತೆ ಎನ್ನುವ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದ್ರೆ ನಿನ್ನೆ(ಆಗಸ್ಟ್ 21) ನಡೆದ ಬಿಜೆಪಿ ಕೋರ್ಕಮಿಟಿ ಸಭೆಯಲ್ಲಿ ಆದ ಚರ್ಚೆ, ನಾಯಕರ ಮನಸ್ಥಿತಿ ಬೇರೆಯದ್ದನ್ನೇ ಹೇಳುತ್ತಿದೆ. ಕಾಂಗ್ರೆಸ್‌ನತ್ತ ಮುಖ ಮಾಡಿರುವ ಬಾಂಬೆ ಫ್ರೆಂಡ್ಸ್ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳೋದು ಬೇಡ ಎಂಬ ಮನಸ್ಥಿತಿಗೆ ಬಿಜೆಪಿ ನಾಯಕರು ಬಂದಿದ್ದಾರೆ. ನಿನ್ನೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಮತ್ತು ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಅಸಮಾಧಾನದ ಬಗ್ಗೆ ಚರ್ಚೆ ನಡೆಸಿದ್ದು, ಬಿಜೆಪಿಗೆ ವಲಸೆ ಬಂದವರು ತಿರಗಾ ಕಾಂಗ್ರೆಸ್ ಬಾಗಿಲು ತಟ್ಟಿದರೆ ಸಿಕ್ಕಾಪಟ್ಟೆ ತಲೆಕೆಡಿಸಿಕೊಳ್ಳುವುದು ಬೇಡ ಎಂಬ ಮನಸ್ಥಿತಿಗೆ ಬಿಜೆಪಿ ರಾಜ್ಯ ನಾಯಕರು ಬಂದಿದ್ದಾರೆ.
ಆಪರೇಷನ್ ಹಸ್ತದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದು ಬೇಡ. ‘ಪಕ್ಷ ಬಿಡುವವರ ಮನವೊಲಿಸೋಣ ಆದ್ರೆ ಅಂಗಲಾಚುವುದು ಬೇಡ. 2024ರ ಲೋಕಸಭೆ ಚುನಾವಣೆ ಬಗ್ಗೆ ಮಾತ್ರ ಗಮನ ಹರಿಸಿ. ಪಕ್ಷ ಸಂಘಟನೆ ಬಲಗೊಳಿಸುವ ಬಗ್ಗೆ ಮಾತ್ರ ಗಮನ ಹರಿಸಬೇಕು. ಕಾಲಕ್ಕೆ ತಕ್ಕಂತೆ ಎಲ್ಲವೂ ಆಗುತ್ತದೆ, ಈಗ ನಾವು ಎಡವಿದ್ದೇವೆ. ಶಾಸಕರ ಜೊತೆಗೆ ಕಾರ್ಯಕರ್ತರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಬೇಕು. ನಮ್ಮದು ಕೇಡರ್ ಬೇಸ್ ಪಾರ್ಟಿ, ಕಾರ್ಯಕರ್ತರಿಗೆ ಧೈರ್ಯ ತುಂಬಬೇಕು. ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ಗೊಂದಲದಿಂದ ಸಮಸ್ಯೆಯಾಗಿದೆ. ಬಿಎಲ್ಪಿ ನಾಯಕ, ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಶೀಘ್ರ ನಿರ್ಧರಿಸಿ. ಈ ಬಗ್ಗೆ ಬೇಕಿದ್ದರೆ ಮತ್ತೊಮ್ಮೆ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಒತ್ತಾಯಿಸೋಣ ಅಂತಾ ಸಭೆಯಲ್ಲಿ ನಿರ್ಧರಿಸಲಾಗಿದೆ.
ಇನ್ನಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ