ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದ ಬಿವೈ ವಿಜಯೇಂದ್ರ

ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದ ಬಿವೈ ವಿಜಯೇಂದ್ರ

ವಿವೇಕ ಬಿರಾದಾರ
|

Updated on:Jun 18, 2024 | 10:37 AM

ಬಿವೈ ವಿಜಯೇಂದ್ರ ಅವರು ತುಮಕೂರಿನ ಕ್ಯಾತಸಂದ್ರ ಬಳಿಯಿರುವ ಸಿದ್ದಗಂಗಾ ಮಠಕ್ಕೂ ಭೇಟಿ ನೀಡಿದರು. ಬೆಳಗ್ಗೆ 8:40ರ ಸುಮಾರಿಗೆ ಸಿದ್ದಗಂಗಾ ಮಠಕ್ಕೆ ತೆರಳಿದ ಬಿವೈ ವಿಜಯೇಂದ್ರ ಅವರು ಡಾ. ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆದರು. ಬಳಿಕ ಸಿದ್ದಲಿಂಗ ಶ್ರೀಗಳನ್ನ ಭೇಟಿಯಾಗಿ ಆಶಿರ್ವಾದ ಪಡೆದರು.

ಚಿತ್ರದುರ್ಗದ ರೇಣುಕಾಸ್ವಾಮಿ (Chitradurga Renukaswamy) ಕೊಲೆ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ರೇಣುಕಾಸ್ವಾಮಿ ಕೊಲೆಯಲ್ಲಿ ಕನ್ನಡ ಚಿತ್ರರಂಗ ಖ್ಯಾತ ನಟ ದರ್ಶನ (Darshan) ಭಾಗಿಯಾಗಿರುವ ಆರೋಪ ಕೇಳಿಬಂದಿದ್ದು, ಪೊಲೀಸರು ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ನಟ ದರ್ಶನ A2 ಆಗಿದ್ದು ಮತ್ತು A1 ದರ್ಶನ ಗೆಳತಿ ಪವಿತ್ರಗೌಡ (Pavitra Gowda) ಅವರು ಆಗಿದ್ದಾರೆ. ಕೊಲೆಯಾದ ರೇಣುಕಾಸ್ವಾಮಿ ಮನೆಗೆ ಇಂದು (ಜೂ.18) ರಾಜ್ಯ ನಾಯಕರು ಭೇಟಿ ನೀಡುತ್ತಿದ್ದಾರೆ. ಗೃಹ ಸಚಿವ ಡಾ.ಜಿ ಪರಮೇಶ್ವರ್ (G Parmeshwara)​ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಭೇಟಿ ನೀಡಿ ಸಾಂತ್ವಾನ ಹೇಳಲಿದ್ದಾರೆ. ಬಿವೈ ವಿಜಯೇಂದ್ರ ಈಗಾಗಲೆ ಚಿತ್ರದುರ್ಗಕ್ಕೆ ಪ್ರಯಾಣ ಬೆಳಸಿದ್ದಾರೆ. ಮಾರ್ಗ ಮಧ್ಯೆ ತುಮಕೂರಿನ ಕ್ಯಾತಸಂದ್ರ ಬಳಿಯಿರುವ ಸಿದ್ದಗಂಗಾ ಮಠಕ್ಕೂ ಭೇಟಿ ನೀಡಿದರು. ಬೆಳಗ್ಗೆ 8:40ರ ಸುಮಾರಿಗೆ ಸಿದ್ದಗಂಗಾ ಮಠಕ್ಕೆ ತೆರಳಿದ ಬಿವೈ ವಿಜಯೇಂದ್ರ ಅವರು ಡಾ.ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆದರು. ಬಳಿಕ ಸಿದ್ದಲಿಂಗ ಶ್ರೀಗಳನ್ನ ಭೇಟಿಯಾಗಿ ಆಶಿರ್ವಾದ ಪಡೆದರು.

ಇದನ್ನೂ ನೋಡಿ: ಪಾರ್ಟಿಯಲ್ಲಿ ದರ್ಶನ್, ಚಿಕ್ಕಣ್ಣ ಜೊತೆ ಇದ್ದ ಮತ್ತೋರ್ವ ಹೀರೋ ಇವರೇ ನೋಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published on: Jun 18, 2024 10:35 AM