Karnataka Budget 2026: ಉರ್ದು ಶಾಲೆಗಳ ಅಭಿವೃದ್ಧಿಗೆ 400 ರೂ. ಕೋಟಿ ಅನುದಾನ ಘೋಷಣೆ ಮಾಡಿದ ಸಿಎಂ ಸಿದ್ಧರಾಮಯ್ಯ
2026ನೇ ಸಾಲಿನ ಕರ್ನಾಟಕ ಬಜೆಟ್ ನಲ್ಲಿ ಸಿಎಂ ಸಿದ್ಧರಾಮಯ್ಯ ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಕಲ್ಯಾಣಕ್ಕೆ ಆದ್ಯತೆ ನೀಡಿದ್ದಾರೆ. ಶಿಕ್ಷಣ, ಉದ್ಯೋಗ, ಆರ್ಥಿಕ ಸಬಲೀಕರಣ ಹಾಗೂ ವಸತಿ ಸೌಲಭ್ಯಗಳ ವಿಸ್ತರಣೆ ಸೇರಿದಂತೆ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ. ಶಿಕ್ಷಣ ಸಂಸ್ಥೆಗಳ ಉನ್ನತೀಕರಣ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಗೂ ಒತ್ತು ನೀಡಲಾಗಿದೆ.
2026ನೇ ಸಾಲಿನ ಕರ್ನಾಟಕ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ. ಹಿಂದುಳಿದ ವರ್ಗಗಳ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು. ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ವ್ಯಾಸಂಗಕ್ಕೆ ಸೌಲಭ್ಯಗಳನ್ನು ವಿಸ್ತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಅಲ್ಪಸಂಖ್ಯಾತ ಕಲ್ಯಾಣಕ್ಕಾಗಿ ಹೊಸ ವಿದ್ಯಾರ್ಥಿನಿಲಯಗಳು, ಸಂತ ಶಿಶುನಾಳ ಶರೀಫರ ಹೆಸರಿನಲ್ಲಿ 10 ಹೊಸ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳ ಉನ್ನತೀಕರಣಕ್ಕೆ ಒತ್ತು ನೀಡಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೆ-ಸಿಇಟಿ, ಜೆಇಇ, ನೀಟ್ ಪರೀಕ್ಷೆಗಳಿಗೆ ತರಬೇತಿ ನೀಡಲು ನಾಲ್ಕು ವಸತಿ ಶಾಲೆಗಳನ್ನು ಸೆಂಟರ್ ಆಫ್ ಎಕ್ಸಲೆನ್ಸ್‌ಗಳನ್ನಾಗಿ ಸ್ಥಾಪಿಸಲಾಗುವುದು. ಜೈನ್, ಬೌದ್ಧ, ಸಿಖ್ ಸಮುದಾಯಗಳ ಅಭಿವೃದ್ಧಿಗೆ 100 ಕೋಟಿ ರೂಪಾಯಿ ಮತ್ತು ಬೌದ್ಧ ಧರ್ಮಾಚಾರಿಗಳಿಗೆ ಮಾಸಿಕ 6,000 ರೂಪಾಯಿ ಗೌರವಧನ ನೀಡಲಾಗುವುದು. ನಿರುದ್ಯೋಗಿ ಯುವಕರಿಗೆ ಫಾಸ್ಟ್ ಫುಡ್ ಟ್ರಕ್, ಮೊಬೈಲ್ ಕಿಚನ್ ಸೌಲಭ್ಯಗಳಿಗೆ ಸಹಾಯಧನ ಹಾಗೂ ಮಹಿಳಾ ಸ್ವಸಹಾಯ ಗುಂಪುಗಳಿಗೆ ಉತ್ತೇಜನ ನೀಡಲಾಗುವುದು. 5,000 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಖರೀದಿಗೆ ತಲಾ 50,000 ರೂಪಾಯಿ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Mar 06, 2026 01:12 PM
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ

