AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2026: ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಾ ಗಾಂಧಿ ಹೆಸರು!

Karnataka Budget 2026: ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಾ ಗಾಂಧಿ ಹೆಸರು!

ಭಾವನಾ ಹೆಗಡೆ
|

Updated on: Mar 06, 2026 | 1:07 PM

Share

ಮನ್‌ರೇಗಾ (MNREGA) ಯೋಜನೆ ಮರುಸ್ಥಾಪನೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಕಾಂಗ್ರೆಸ್ ಬೃಹತ್ ಪ್ರತಿಭಟನೆಯಲ್ಲಿ ಮಹಾತ್ಮ ಗಾಂಧೀಜಿ ಹೆಸರನ್ನು ಶಾಶ್ವತಗೊಳಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ನಾಮಕರಣ ಮಾಡುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದರು. ಅದರಂತೆಯೇ ಇಂದಿನ ಕರ್ನಾಟಕ ಸರ್ಕಾರವು 2026ರ ಬಜೆಟ್‌ನಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳನ್ನು ಮಹಾತ್ಮ ಗಾಂಧಿ ಗ್ರಾಮ ಪಂಚಾಯತಿ ಎಂದು ನಾಮಕರಣ ಮಾಡುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯಿತಿಗಳ ಸ್ವಾವಲಂಬನೆಗಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸೋಲಾರ್ ಮೈಕ್ರೋ ಗ್ರಿಡ್‌ಗಳನ್ನು ಸ್ಥಾಪಿಸುವ ಅನಂತ ಯೋಜನೆಯನ್ನು ಜಾರಿಗೊಳಿಸಲಾಗುವುದು

ಬೆಂಗಳೂರು, ಮಾರ್ಚ್​ 06: ಮನ್‌ರೇಗಾ (MNREGA) ಯೋಜನೆ ಮರುಸ್ಥಾಪನೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಕಾಂಗ್ರೆಸ್ ಬೃಹತ್ ಪ್ರತಿಭಟನೆಯಲ್ಲಿ ಮಹಾತ್ಮ ಗಾಂಧೀಜಿ ಹೆಸರನ್ನು ಶಾಶ್ವತಗೊಳಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ನಾಮಕರಣ ಮಾಡುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದರು. ಅದರಂತೆಯೇ ಇಂದಿನ ಕರ್ನಾಟಕ ಸರ್ಕಾರವು 2026ರ ಬಜೆಟ್‌ನಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳನ್ನು ಮಹಾತ್ಮ ಗಾಂಧಿ ಗ್ರಾಮ ಪಂಚಾಯತಿ ಎಂದು ನಾಮಕರಣ ಮಾಡುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯಿತಿಗಳ ಸ್ವಾವಲಂಬನೆಗಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸೋಲಾರ್ ಮೈಕ್ರೋ ಗ್ರಿಡ್‌ಗಳನ್ನು ಸ್ಥಾಪಿಸುವ ಅನಂತ ಯೋಜನೆಯನ್ನು ಜಾರಿಗೊಳಿಸಲಾಗುವುದು.

ಕೇಂದ್ರ ಸರ್ಕಾರದ ನರೇಗಾ ಯೋಜನೆಯ ಬದಲಾವಣೆಯ ಕುರಿತು ರಾಜ್ಯ ಸರ್ಕಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬದಲಾವಣೆಯು ಯೋಜನೆಯ ಮೂಲ ಉದ್ದೇಶ ಮತ್ತು ಗ್ರಾಮ ಸ್ವರಾಜ್ ಪರಿಕಲ್ಪನೆಗೆ ವಿರುದ್ಧವಾಗಿದೆ ಎಂದು ವಾದಿಸಿದೆ. ರಾಜ್ಯದ ರೈತ ಮಹಿಳೆಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿ, ಜಲಜೀವನ್ ಮಿಷನ್ ಅನುಷ್ಠಾನ, ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಅಭಿವೃದ್ಧಿಗಾಗಿ ಕಲ್ಯಾಣ ಪಥ ಯೋಜನೆಯಡಿ 1,000 ಕೋಟಿ ರೂ.ಗಳ ಅನುದಾನ ಸೇರಿದಂತೆ ಹಲವು ಪ್ರಮುಖ ಯೋಜನೆಗಳಿಗೆ ಒತ್ತು ನೀಡಲಾಗಿದೆ.

ಕರ್ನಾಟಕ ಬಜೆಟ್ ಕುರಿತ ಕ್ಷಣಕ್ಷಣದ ಅಪ್​ಡೇಟ್​ಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us