ಅನ್ನಭಾಗ್ಯ ಅಕ್ಕಿ ಜೊತೆ ಸಿಗಲಿದೆ ಉಪ್ಪು, ಸಕ್ಕರೆ, ತೊಗರಿ ಸಮೇತ ಇಂದಿರಾ ಕಿಟ್! ಬಿಪಿಎಲ್ ಕಾರ್ಡುದಾರರಿಗೆ ಬಜೆಟ್ ಗಿಫ್ಟ್

Updated on: Mar 06, 2026 | 1:01 PM

ಕರ್ನಾಟಕ ಬಜೆಟ್ 2026ರಲ್ಲಿ ಅನ್ನಭಾಗ್ಯ ಯೋಜನೆಯಡಿ ಹೊಸ ಇಂದಿರಾ ಆಹಾರ ಕಿಟ್ ವಿತರಿಸುವ ಮಹತ್ವದ ಘೋಷಣೆ ಮಾಡಲಾಗಿದೆ. ಹೆಚ್ಚುವರಿ 5 ಕೆಜಿ ಅಕ್ಕಿ ಬದಲು, ಫಲಾನುಭವಿಗಳಿಗೆ ತೊಗರಿಬೇಳೆ, ಸಕ್ಕರೆ, ಉಪ್ಪು ಮತ್ತು ಅಡಿಗೆ ಎಣ್ಣೆ ಒಳಗೊಂಡ ಪೌಷ್ಟಿಕಾಂಶಯುಕ್ತ ಕಿಟ್ ನೀಡಲಾಗುವುದು. ಇದಕ್ಕಾಗಿ 6,200 ಕೋಟಿ ರೂ. ಮೀಸಲಿಡಲಾಗಿದೆ.

ಬೆಂಗಳೂರು, ಮಾರ್ಚ್ 6: ಕರ್ನಾಟಕ ಸರ್ಕಾರವು 2026ರ ಬಜೆಟ್‌ನಲ್ಲಿ ಬಿಪಿಎಲ್ ಕಾರ್ಡ್​​​ದಾರರಿಗೆ ಮಹತ್ವದ ಯೋಜನೆ ಘೋಷಿಸಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ ರಾಜ್ಯದ 4.54 ಕೋಟಿ ಬಡ ಫಲಾನುಭವಿಗಳಿಗೆ 5 ಕೆಜಿ ಹೆಚ್ಚುವರಿ ಅಕ್ಕಿಯನ್ನು ಯಶಸ್ವಿಯಾಗಿ ವಿತರಿಸಲಾಗುತ್ತಿತ್ತು. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆಗೆ 17,167 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಈಗ, ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ, ಪ್ರತಿ ತಿಂಗಳು ಪೌಷ್ಟಿಕಾಂಶಯುಳ್ಳ ಇಂದಿರಾ ಆಹಾರ ಕಿಟ್ ವಿತರಿಸಲು ಸರ್ಕಾರ ಉದ್ದೇಶಿಸಿದೆ. ಈ ಕಿಟ್‌ನಲ್ಲಿ ತೊಗರಿಬೇಳೆ, ಸಕ್ಕರೆ, ಉಪ್ಪು ಮತ್ತು ಅಡಿಗೆ ಎಣ್ಣೆ ಒಳಗೊಂಡಿರುತ್ತದೆ. 2026-27ನೇ ಸಾಲಿನಲ್ಲಿ ಈ ಯೋಜನೆಗಾಗಿ 6,200 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕ ಬಜೆಟ್ ಕುರಿತ ಕ್ಷಣಕ್ಷಣದ ಅಪ್​ಡೇಟ್​ಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More