ಕರ್ನಾಟಕದ ಒಟ್ಟು ಸಾಲ ಎಷ್ಟು ಗೊತ್ತೇ? ಬಜೆಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಕೊಟ್ಟ ಮಾಹಿತಿ ಇಲ್ಲಿದೆ

Updated on: Mar 06, 2026 | 12:06 PM

ಕರ್ನಾಟಕ ಬಜೆಟ್ 2026: ರಾಜ್ಯವು ಬಲವಾದ ಆರ್ಥಿಕ ಪ್ರಗತಿ ಸಾಧಿಸುತ್ತಿದ್ದರೂ, ಕೇಂದ್ರ ಸರ್ಕಾರದ ತೆರಿಗೆ ನೀತಿಗಳಿಂದ ಉಂಟಾದ ಆದಾಯ ನಷ್ಟ ಮತ್ತು ಜಿಎಸ್‌ಟಿ ತರ್ಕಬದ್ಧಗೊಳಿಸುವಿಕೆಯ ಸವಾಲುಗಳನ್ನು ಎದುರಿಸುತ್ತಿದೆ. 8,24,389 ಕೋಟಿ ರೂಪಾಯಿ ಒಟ್ಟು ಸಾಲವ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್​​ನಲ್ಲಿ ತಿಳಿಸಿದ್ದಾರೆ.

ಬೆಂಗಳೂರು, ಮಾರ್ಚ್ 6: 2025-26ನೇ ಸಾಲಿನಲ್ಲಿ ರಾಜ್ಯದ ಜಿಎಸ್‌ಡಿಪಿ 8.1% ನೈಜ ಬೆಳವಣಿಗೆ ದಾಖಲಿಸಿದ್ದು, ಇದು ದೇಶದ ಜಿಡಿಪಿಗಿಂತ ಹೆಚ್ಚಾಗಿದೆ. ಕೃಷಿ, ಕೈಗಾರಿಕಾ ಮತ್ತು ಸೇವಾ ವಲಯಗಳಲ್ಲಿ ಸಮತೋಲಿತ ಬೆಳವಣಿಗೆ ಕಂಡುಬಂದಿದೆ. ರಾಜ್ಯವು 56,432 ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 2026-27ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಮೂಲಸೌಕರ್ಯ ಅಭಿವೃದ್ಧಿಗೆ 8,600 ಕೋಟಿ ರೂಪಾಯಿಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು. ಅಲ್ಲದೆ, ಸಾಲದ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರದ ತೆರಿಗೆ ನೀತಿ ಬದಲಾವಣೆಗಳು ಮತ್ತು ಜಿಎಸ್‌ಟಿ ದರ ತರ್ಕಬದ್ಧಗೊಳಿಸುವಿಕೆಯಿಂದ ರಾಜ್ಯದ ಆದಾಯ ಸಂಗ್ರಹಣೆಗೆ ಸವಾಲುಗಳು ಎದುರಾಗಿವೆ. ಜಿಎಸ್‌ಟಿ ಸಂಗ್ರಹಣೆಯಲ್ಲಿ ಪ್ರಸಕ್ತ ವರ್ಷ 10,000 ಕೋಟಿ ರೂಪಾಯಿ ಮತ್ತು ಮುಂದಿನ ವರ್ಷ 15,000 ಕೋಟಿ ರೂಪಾಯಿ ಕೊರತೆಯಾಗಲಿದೆ ಎಂದು ಅಂದಾಜಿಸಲಾಗಿದೆ. ರಾಜ್ಯದ ಒಟ್ಟು ಸಾಲ 8,24,389 ಕೋಟಿ ರೂಪಾಯಿ ಎಂದು ಸಿದ್ದರಾಮಯ್ಯ ತಿಳಿಸಿದ್ದು, ಕೇಂದ್ರದ ಅಸಹಕಾರದ ನಡುವೆಯೂ ವಿತ್ತೀಯ ಶಿಸ್ತು ಕಾಪಾಡಿಕೊಂಡು ಅಭಿವೃದ್ಧಿ ಮುಂದುವರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.

ಕರ್ನಾಟಕ ಬಜೆಟ್ ಕುರಿತ ಕ್ಷಣಕ್ಷಣದ ಅಪ್​ಡೇಟ್​ಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 06, 2026 12:04 PM
Loading...
Unable to load recommendations.
Follow Us