Karnataka Budget 2025: ವಿಧಾನಮಂಡಲ ಅಧಿವೇಶನ, ರಾಜ್ಯಪಾಲರ ಭಾಷಣ ಲೈವ್
Karnataka Budget 2025: ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗಿದೆ. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದ್ದಾರೆ. ಮಾರ್ಚ್ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 16ನೇ ಬಜೆಟ್ ಹಾಗೂ ಮುಖ್ಯಮಂತ್ರಿ ಆಗಿ 9ನೇ ಬಜೆಟ್ ಮಂಡನೆ ಮಾಡಲಿದ್ದಾರೆ.
ಬೆಂಗಳೂರು, ಮಾರ್ಚ್ 03: ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗಿದೆ. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದ್ದಾರೆ. ಮಾರ್ಚ್ 4ರಿಂದ 6ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಬಳಿಕ, ಮಾರ್ಚ್ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಲಿದ್ದಾರೆ. ವಿಧಾನಮಂಡಲ ಅಧಿವೇಶನ ಮಾರ್ಚ್ 21ರವರೆಗೆ ನಡೆಯಲಿದೆ. ವಿಧಾನಮಂಡಲ ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 4ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಸಿಎಲ್ಪಿ ಸಭೆ ನಡೆಯಲಿದೆ. ಅಧಿವೇಶನದಲ್ಲಿ ವಿಪಕ್ಷಗಳಿಗೆ ಉತ್ತರಿಸಬೇಕಾದ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ವಿಧಾನಮಂಡಲ ಅಧಿವೇಶನ ಲೈವ್ ಆಗಿ ಇಲ್ಲಿ ನೋಡಿ.
Latest Videos

ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್

ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!

ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ

VIDEO: ಆಂಬ್ಯುಲೆನ್ಸ್ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
