Karnataka Budget 2025: ವಿಧಾನಮಂಡಲ ಅಧಿವೇಶನ, ರಾಜ್ಯಪಾಲರ ಭಾಷಣ ಲೈವ್​

|

Updated on: Mar 03, 2025 | 11:10 AM

Karnataka Budget 2025: ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗಿದೆ. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಭಾಷಣ ಮಾಡಿದ್ದಾರೆ. ಮಾರ್ಚ್​ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 16ನೇ ಬಜೆಟ್‌ ಹಾಗೂ ಮುಖ್ಯಮಂತ್ರಿ ಆಗಿ 9ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ.

ಬೆಂಗಳೂರು, ಮಾರ್ಚ್​ 03: ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗಿದೆ. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಭಾಷಣ ಮಾಡಿದ್ದಾರೆ. ಮಾರ್ಚ್​ 4ರಿಂದ 6ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಬಳಿಕ, ಮಾರ್ಚ್​ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಲಿದ್ದಾರೆ. ವಿಧಾನಮಂಡಲ ಅಧಿವೇಶನ ಮಾರ್ಚ್ 21ರವರೆಗೆ ನಡೆಯಲಿದೆ. ವಿಧಾನಮಂಡಲ ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್​ 4ರಂದು ಕಾಂಗ್ರೆಸ್​​ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಿಎಲ್​ಪಿ ಸಭೆ​ ನಡೆಯಲಿದೆ. ಅಧಿವೇಶನದಲ್ಲಿ ವಿಪಕ್ಷಗಳಿಗೆ ಉತ್ತರಿಸಬೇಕಾದ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ವಿಧಾನಮಂಡಲ ಅಧಿವೇಶನ ಲೈವ್​ ಆಗಿ ಇಲ್ಲಿ ನೋಡಿ.