Karnataka Budget 2023: ವಿಧಾನಮಂಡಲದ ಬಜೆಟ್ ಅಧಿವೇಶನ ಇಂದಿನಿಂದ, ಬಸವರಾಜ ಬೊಮ್ಮಾಯಿ ಸರ್ಕಾರ ಮಂಡಿಸಲಿರುವ ಕೊನೆಯ ಬಜೆಟ್
ಕೆಂಪು ರತ್ನಗಂಬಳಿಯ ಮೇಲೆ ರಾಜ್ಯಪಾಲರು ಘನ ಗಾಂಭೀರ್ಯದಿಂದ ನಡೆದು ಬರುವುದನ್ನುಇಲ್ಲಿ ನೋಡಬಹುದು. ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನ ಸಭೆಯ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಮೊದಲಾದವರಿದ್ದರು
ಬೆಂಗಳೂರು: ರಾಜ್ಯ ವಿಧಾನಮಂಡಲದ ಅಧಿವೇಶನ (State Budget Session) ಇಂದಿನಿಂದ ಅರಂಭವಾಗಿದೆ. ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಮಂಡಿಸಲಿರುವ ಕೊನೆಯ ಬಜೆಟ್ ಇದಾಗಿದೆ. ಜಂಟಿ ಸದನವನ್ನು ಉದ್ದೇಶಿಸಿ ಮಾತಾಡಲು ಕರ್ನಾಟಕ ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ವಿಧಾನಸೌಧಕ್ಕೆ ಆಗಮಿಸಿದರು. ಕೆಂಪು ರತ್ನಗಂಬಳಿಯ ಮೇಲೆ ರಾಜ್ಯಪಾಲರು ಘನ ಗಾಂಭೀರ್ಯದಿಂದ ನಡೆದು ಬರುವುದನ್ನು ಇಲ್ಲಿ ನೋಡಬಹುದು. ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ವಿಧಾನ ಸಭೆಯ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ, ಕಾನೂನು ಸಚಿವ ಜೆಸಿ ಮಾಧುಸ್ವಾಮಿ, ಬಸವರಾಜ ಹೊರಟ್ಟಿ ಮೊದಲಾದವರು ಬರುವುದನ್ನು ವಿಡಿಯೋದಲ್ಲಿ ನೋಡಬಹುದು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 10, 2023 01:18 PM