ಚಿತ್ರದುರ್ಗ: ಚಳ್ಳಕೆರೆ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಸಾರಿಗೆ ಬಸ್, 42 ಪ್ರಯಾಣಿಕರು ಅಪಾಯದಿಂದ ಪಾರು
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೊಟ್ಟೆಜ್ಜನ ಕಪಿಲೆ ಬಳಿ ಸಾರಿಗೆ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಸುರಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ 42 ಪ್ರಯಾಣಿಕರಿದ್ದರು. ಅದೃಷ್ಟವಶಾತ್, ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಎಲ್ಲಾ 42 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗ, ನವೆಂಬರ್ 17: ಚಳ್ಳಕೆರೆ ತಾಲೂಕಿನಲ್ಲಿ ಭಾರಿ ಬಸ್ ಅಪಘಾತವೊಂದು ಸಂಭವಿಸಿದ್ದು ಅದೃಷ್ಟವಶಾತ್, ಬಸ್‌ನಲ್ಲಿದ್ದ 42 ಪ್ರಯಾಣಿಕರು ಯಾವುದೇ ಗಂಭೀರ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೊಟ್ಟೆಜ್ಜನ ಕಪಿಲೆ ಎಂಬಲ್ಲಿ ನಡೆದಿದೆ. ಸುರಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ ಒಂದು ನಿಯಂತ್ರಣ ಕಳೆದುಕೊಂಡು ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಮುಂಭಾಗಕ್ಕೆ ಹಾನಿಯಾಗಿದೆ. ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ಮತ್ತು ಪ್ರಯಾಣಿಕರು ನೆರವಿಗೆ ಧಾವಿಸಿದ್ದು, ರಕ್ಷಣಾ ಕಾರ್ಯ ಆರಂಭಿಸಿದ್ದಾರೆ.
ಬಸ್‌ನಲ್ಲಿದ್ದ ಒಟ್ಟು 42 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನೆ ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಚಾಲಕನ ನಿರ್ಲಕ್ಷ್ಯ ಅಥವಾ ತಾಂತ್ರಿಕ ದೋಷ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
