5 ಗ್ಯಾರಂಟಿಗಳಿಗೆ ನನ್ನ ವಿರೋಧವಿಲ್ಲ, ನಿಲ್ಲಿಸಬೇಡಿ, ಮುಂದುವರೆಸಿ ಎಂದ ಕುಮಾರಸ್ವಾಮಿ
ಕರ್ನಾಟಕ ಸರ್ಕಾರದ ಬಸ್ ಟಿಕೆಟ್ ದರ ಹೆಚ್ಚಳ ಮತ್ತು 5 ಖಾತರಿ ಯೋಜನೆಗಳನ್ನು ನಿಲ್ಲಿಸುವ ಚಿಂತನೆಗೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬಡ ಮತ್ತು ಮಧ್ಯಮ ವರ್ಗದ ಜನರ ಮೇಲೆ ಈ ನಿರ್ಧಾರಗಳ ಪರಿಣಾಮ ಬೀರುತ್ತದೆ ಎಂದು ಅವರು ಆಕ್ಷೇಪಿಸಿದ್ದಾರೆ. ಜನರಿಂದ ತೆರಿಗೆ ಸಂಗ್ರಹಿಸಿ ಅದೇ ಹಣವನ್ನು ಅವರಿಗೆ ಹಂಚುವುದು ಸರಿಯಲ್ಲ. ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಬೇಕೆಂದು ಅವರು ಆಗ್ರಹಿಸಿದ್ದಾರೆ.
ಸರ್ಕಾರಿ ಬಸ್ಗಳ ಟಿಕೆಟ್ ದರ ಹೆಚ್ಚಳ ಮಾಡಿ, ಬಡವರ ಮತ್ತು ಮಧ್ಯಮ ವರ್ಗದ ಜನರ ಬದುಕಿನ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲಿಸಲು ಕಾರಣ ಹುಡುಕುತ್ತಿದೆ. ಹೇಗಾದರೂ ಮಾಡಿ ಗ್ಯಾರಂಟಿಗಳನ್ನು ನಿಲ್ಲಿಸಲು ನೆಪ ಹುಡುಕುತ್ತಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ 5 ಗ್ಯಾರಂಟಿಗಳನ್ನು ನಿಲ್ಲಿಸಬೇಡಿ ಜನ ಹೇಳುತ್ತಿದ್ದಾರೆ. ಸಾಕಷ್ಟು ಜನರಿಗೆ ಇದರಿಂದ ಅನುಕೂಲವಾಗಿದೆ ಎಂದು ಹೇಳುತ್ತಿದ್ದಾರೆ. ಗ್ಯಾರಂಟಿ ಯೋಜನೆಗೆ ನನ್ನ ವಿರೋಧವಿಲ್ಲ. ದಯವಿಟ್ಟು ನಿಲ್ಲಿಸಬೇಡಿ, ಮುಂದುವರೆಸಿ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹೇಳಿದರು. ಆದರೆ, ಜನರಿಂದಲೇ ಕಿತ್ತುಕೊಂಡು ಅವರಿಗೆ ಕೊಡುವ ಕೆಲಸ ಮಾಡಬಾರದು. ಅತ್ತೆಯ ಆಸ್ತಿಯನ್ನು ಅಳಿಯ ದಾನ ಮಾಡಿದ ಎನ್ನುವ ಮಾತಿನಂತೆ ಜನರಿಂದ ಕಿತ್ತುಕೊಂಡು ಅವರಿಗೆ ಕೊಡುವುದಕ್ಕೆ ಇವರೇ ಬೇಕಾ? ಎಂದು ಹೆಚ್ಡಿ ಕುಮಾರಸ್ವಾಮಿ ಪ್ರಶ್ನಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos