AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka By Elections 2026: ಬೈ ಎಲೆಕ್ಷನ್ ಅಖಾಡದಲ್ಲಿಂದು ಸಿಎಂ ಮತಬೇಟೆ! ದಾವಣಗೆರೆ, ಬಾಗಲಕೋಟೆಯಲ್ಲಿ ಪ್ರಚಾರ

Karnataka By Elections 2026: ಬೈ ಎಲೆಕ್ಷನ್ ಅಖಾಡದಲ್ಲಿಂದು ಸಿಎಂ ಮತಬೇಟೆ! ದಾವಣಗೆರೆ, ಬಾಗಲಕೋಟೆಯಲ್ಲಿ ಪ್ರಚಾರ

ಭಾವನಾ ಹೆಗಡೆ
|

Updated on: Apr 06, 2026 | 11:26 AM

Share

ಕರ್ನಾಟಕದಲ್ಲಿ ಏಪ್ರಿಲ್ 1ರಂದು ಮತದಾನ ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ದಾವಣಗೆರೆ ದಕ್ಷಿಣವು ಹೈ ವೋಲ್ಟೇಜ್ ಕದನಕ್ಷೇತ್ರವಾಗಿ ಮಾರ್ಪಟ್ಟಿದೆ. ಇಂದು ಜಿಲ್ಲೆಗೆ ಆಗಮಿಸಲಿರುವ ಸಿಎಂ, ಕಾಂಗ್ರೆಸ್ ಅಭ್ಯರ್ಥಿ ಪರ ಬಿರುಸಿನ ಪ್ರಚಾರ ನಡೆಸಿ ಸಭೆ ಹಾಗೂ ರೋಡ್ ಶೋ ನಡೆಸಲಿದ್ದಾರೆ.

ದಾವಣಗೆರೆ, ಏಪ್ರಿಲ್ 06: ಕರ್ನಾಟಕದಲ್ಲಿ ಏಪ್ರಿಲ್ 1ರಂದು ಮತದಾನ ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ದಾವಣಗೆರೆ ದಕ್ಷಿಣವು ಹೈ ವೋಲ್ಟೇಜ್ ಕದನಕ್ಷೇತ್ರವಾಗಿ ಮಾರ್ಪಟ್ಟಿದೆ. ಇಂದು ಜಿಲ್ಲೆಗೆ ಆಗಮಿಸಲಿರುವ ಸಿಎಂ, ಕಾಂಗ್ರೆಸ್ ಅಭ್ಯರ್ಥಿ ಪರ ಬಿರುಸಿನ ಪ್ರಚಾರ ನಡೆಸಿ ಸಭೆ ಹಾಗೂ ರೋಡ್ ಶೋ ನಡೆಸಲಿದ್ದಾರೆ.

ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡದ ಕಾರಣಕ್ಕೆ ಸಚಿವ ಜಮೀರ್ ಅಹಮದ್ ಖಾನ್ ಪ್ರಚಾರದಿಂದ ದೂರ ಉಳಿದಿದ್ದಾರೆ ಎನ್ನಲಾಗಿತ್ತು. ಆದರೆ, ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ದಾವಣಗೆರೆಗೆ ಆಗಮಿಸಿದ ಜಮೀರ್, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನಿವಾಸಕ್ಕೆ ಭೇಟಿ ನೀಡಿದರು. ಜಂಟಿ ಸುದ್ದಿಗೋಷ್ಠಿ ನಡೆಸಿ, ತಮ್ಮಿಬ್ಬರ ನಡುವೆ ಯಾವುದೇ ಮುನಿಸು ಇಲ್ಲ ಎಂದು ಸ್ಪಷ್ಟಪಡಿಸಿದರು. 2028ರಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡುವ ಭರವಸೆ ನೀಡಲಾಗಿದೆ ಎಂದು ಜಮೀರ್ ತಿಳಿಸಿದರು. ಆದಾಗ್ಯೂ, ಅವರು ಮುಸ್ಲಿಂ ಬಹುಸಂಖ್ಯಾತ ಪ್ರದೇಶಗಳಲ್ಲಿ ಪ್ರಚಾರ ಮಾಡದೆ ವಾಪಸಾಗಿದ್ದು ಹಲವು ಚರ್ಚೆಗಳಿಗೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Follow Us