ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್

| Updated By: ರಮೇಶ್ ಬಿ. ಜವಳಗೇರಾ

Updated on: Nov 23, 2024 | 3:02 PM

ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದ್ದು, ಬಿಜೆಪಿ ಮತ್ತು ಜೆಡಿಎಸ್​ಗೆ ಮುಖಭಂಗವಾಗಿದೆ. ಇನ್ನು ಫಲಿತಾಂಶದ ಬಗ್ಗೆ ಯತ್ನಾಳ್ ಪ್ರತಿಕ್ರಿಯಿಸಿದ್ದು, ಕರ್ನಾಟಕದಲ್ಲಿ ಬಿಜೆಪಿ ಸೋಲಿಗೆ ಅಪ್ಪ-ಮಗ ಕಾರಣವೆಂದು ಬಿಎಸ್​ವೈ ಮತ್ತು ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿ. (ನವೆಂಬರ್ 23): ಕರ್ನಾಟಕದ ಮೂರು ವಿಧಾನಸಭಾ ಉಪಚುನಾವಣೆಗಳಲ್ಲಿ ಕಾಂಗ್ರೆಸ್​ ಗೆಲುವು ಸಾಧಿಸಿದೆ. ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ಇದರಿಂದ ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಜೆಡಿಎಸ್​​ಗೆ ಮುಖಭಂಗವಾಗಿದೆ. ಇನ್ನು ಈ ರಿಲಸ್ಟ್​ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್​ ಪ್ರತಿಕ್ರಿಯಿಸಿ, ಮೂರಕ್ಕೆ ಮೂರು ಕ್ಷೇತ್ರಗಳಲ್ಲಿ ಸೋಲಿಗೆ ಅಪ್ಪ-ಮಗನನ್ನು ಹೊಣೆ ಮಾಡಿದ್ದಾರೆ.

ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಯತ್ಬಾಳ್, ಮಹಾರಾಷ್ಟ್ರ, ಜಾರ್ಖಂಡ್ ನಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ ಎಂದು ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಕಿಡಿಕಾರಿದರು.

ವಕ್ಫ್​ ವಿವಾದ ಚುನಾವಣೆಯಲ್ಲಿ ವರ್ಕೌಟ್ ಆಗಲಿಲ್ವಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯತ್ನಾಳ್, ವಕ್ಫ್​ ವಿವಾದ ಈಗ ಆರಂಭವಾಗಿದೆ, ಜನರಿಗೆ ಇನ್ನೂ ಗೊತ್ತಾಗಬೇಕಿದೆ. ವಕ್ಫ್ ವಿಚಾರವಾಗಿಯೇ ಮಹಾರಾಷ್ಟ್ರದಲ್ಲಿ ಚುನಾವಣೆ ಮಾಡಿದರು. ಉದ್ಧವ್​ ಠಾಕ್ರೆ ಔರಂಗಜೇಬ್ ಸಮಾಧಿಗೆ ಹೋಗಿ ನಮಸ್ಕಾರ ಮಾಡಿದ್ರು. ಆದರೆ ಉದ್ಧವ್ ಠಾಕ್ರೆಯನ್ನು ಮಹಾರಾಷ್ಟ್ರದ ಜನರು ಮುಳುಗಿಸಿದ್ರು. ಮಹಾರಾಷ್ಟ್ರ, ಜಾರ್ಖಂಡ್​ನಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ ಎಂದು ತಿವಿದರು.