ಉಪ ಚುನಾವಣೆ ಹೊತ್ತಲ್ಲಿ ಚುನಾವಣಾಧಿಕಾರಿಯ ಕಾರನ್ನು ಅಡ್ಡಗಟ್ಟಿ ಹೈಡ್ರಾಮಾ
ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರಸಭೆ ವಾರ್ಡ್ ನಂ 19ರ ಉಪ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ರತ್ನಾ ತಳವಾರ ಅವರು ನಾಮಪತ್ರ ಸರಿಯಾಗಿ ಭರ್ತಿ ಮಾಡಿಲ್ಲ. ಆದರೂ ಅವರ ನಾಮಪತ್ರ ಅಂಗೀಕಾರ ಮಾಡಿದ್ದಾರೆ ಎಂದು ಬಿಜೆಪಿಗರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಚುನಾವಣಾಧಿಕಾರಿಗಳ ವಿರುದ್ಧ ದಿಕ್ಕಾರ ಕೂಗಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರಸಭೆ ವಾರ್ಡ್ ನಂ 19ರ ಉಪ ಚುನಾವಣೆ ನಡೆಯುತ್ತಿದೆ. ಬಿಜೆಪಿ ಸದಸ್ಯ ಶ್ರೀನಿವಾಸ ಸುರಪುರ ಅವರ ಅಕಾಲಿಕ ಮರಣದಿಂದ ಸ್ಥಾನ ತೆರವಾಗಿದೆ. ಹೀಗಾಗಿ, ಈ ಸ್ಥಾನಕ್ಕೆ ಉಪ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಪ್ರತಿಷ್ಠೆಯಾಗಿ ಸ್ವೀಕರಿಸಿವೆ. ಹುನಗುಂದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ ಮತ್ತು ಬಿಜೆಪಿ ಮಾಜಿ ಶಾಸಕ ದೊಡ್ಡನಗೌಡ ಪಾಟಿಲ್ ಇಬ್ಬರಿಗೂ ಈ ಚುನಾವಣೆ ಪ್ರತಿಷ್ಠೆಯಾಗಿದೆ.
ಬಿಜೆಪಿಯಿಂದ ನಾಗೇಶ್ ಮೇದಾರ ಮತ್ತು ಕಾಂಗ್ರೆಸ್ನಿಂದ ರತ್ನಾ ತಳವಾರ ನಾಪಪತ್ರ ಸಲ್ಲಿಸಿದ್ದಾರೆ. ರತ್ನಾ ತಳವಾರ ಅವರ ನಾಮಪತ್ರ ಪರಿಶೀಲನೆ ನಂತರ ನಗರಸಭೆ ಎದುರು ಹೈಡ್ರಾಮಾ ಸೃಷ್ಟಿಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ರತ್ನಾ ತಳವಾರ ಅವರು ನಾಮಪತ್ರ ಸರಿಯಾಗಿ ಭರ್ತಿ ಮಾಡಿಲ್ಲ. ಆದರೂ ಅವರ ನಾಮಪತ್ರ ಅಂಗೀಕಾರ ಮಾಡಿದ್ದಾರೆ ಎಂದು ಬಿಜೆಪಿಗರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಚುನಾವಣಾಧಿಕಾರಿಗಳ ವಿರುದ್ಧ ದಿಕ್ಕಾರ ಕೂಗಿದ್ದಾರೆ. ಚುನಾವಣಾಧಿಕಾರಿಗಳ ಕಾರನ್ನು ಅಡ್ಡಗಟ್ಟಲು ಯತ್ನಿಸಿದರು. ಕೂಡಲೆ ಪೊಲೀಸರು ಅವರನ್ನು ವಶಕ್ಕೆ ಪಡೆದರು. ಬಿಜೆಪಿ ಕಾರ್ಯಕರ್ತರು ಚುನಾವಣಾಧಿಕಾರಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನವೆಂಬರ್ 23 ರಂದು ಮತದಾನ ನಡೆಯಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ