AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವ ಮಂಟಪʼ ಕೃತಿ ಮುಟ್ಟುಗೋಲಿಗೆ ಸಂಪುಟ ಸಮ್ಮತಿ: ಲೇಖಕ ರವಿ ಹಂಜ್​ ವಿರುದ್ಧ FIR ದಾಖಲಿಸಲು ತೀರ್ಮಾನ

ಬಸವ ಮಂಟಪʼ ಕೃತಿ ಮುಟ್ಟುಗೋಲಿಗೆ ಸಂಪುಟ ಸಮ್ಮತಿ: ಲೇಖಕ ರವಿ ಹಂಜ್​ ವಿರುದ್ಧ FIR ದಾಖಲಿಸಲು ತೀರ್ಮಾನ

ರಮೇಶ್ ಬಿ. ಜವಳಗೇರಾ
|

Updated on:Nov 19, 2026 | 9:05 PM

Share

ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರನ್ನು ಹಾಗೂ ಲಿಂಗಾಯತರನ್ನು ಅವಹೇಳನ ಮಾಡಿರುವ ಲೇಖಕ ರವಿ ಹಂಜ್ ವಿರುದ್ಧ ಕಾನೂನು ಕ್ರಮಕ್ಕೆ ಹಾಗೂ ʻಬಸವ ಮಂಟಪʼ ಕೃತಿ ಮುಟ್ಟುಗೋಲಿಗೆ ಸಚಿವ ಸಂಪುಟ ಸಮ್ಮತಿ ಸೂಚಿಸಿದೆ. ಸಚಿವ ಸಂಪುಟ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಪರಮೇಶ್ವರ್

ಬೆಂಗಳೂರು, (ನವೆಂಬರ್ 19): ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರನ್ನು ಹಾಗೂ ಲಿಂಗಾಯತರನ್ನು ಅವಹೇಳನ ಮಾಡಿರುವ ಲೇಖಕ ರವಿ ಹಂಜ್ ವಿರುದ್ಧ ಕಾನೂನು ಕ್ರಮಕ್ಕೆ ಹಾಗೂ ʻಬಸವ ಮಂಟಪʼ ಕೃತಿ ಮುಟ್ಟುಗೋಲಿಗೆ ಸಚಿವ ಸಂಪುಟ ಸಮ್ಮತಿ ಸೂಚಿಸಿದೆ. ಸಚಿವ ಸಂಪುಟ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಪರಮೇಶ್ವರ್, 12ನೇ ಶತಮಾನದ ಕ್ರಾಂತಿಕಾರಿ ಭಕ್ತಿ ಭಂಡಾರಿ ಬಸವಣ್ಣ ವಿರುದ್ಧ ಅಮೆರಿಕ ಮೂಲದ ಲೇಖಕ ರವಿ ಹಂಜ್ (Author Ravi Hanj) ಬರೆದಿರುವ ಪುಸ್ತಕ ʻಬಸವ ಮಂಟಪʼ ಬ್ಯಾನ್‌ ಮಾಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಲ್ಲದೇ ಲೇಖಕ ರವಿ ಹಂಜ್​ ವಿರುದ್ಧ FIR ದಾಖಲಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಪುಸ್ತಕದಲ್ಲಿ ಸಾಮಾಜಿಕ ಸುಧಾರಕ ಬಸವಣ್ನನವರ ಚಾರಿತ್ರ್ಯ ವಧೆ ಮಾಡಿರುವ ಆರೋಪ ಮಾಡಲಾಗಿದೆ. ಬಸವಣ್ಣನವರನ್ನ ಕೊಲೆಗಾರನ ರೀತಿ ಬಿಂಬಿಸಿರುವ ಲೇಖಕ ಬಿಜ್ಜಳನ ಹತ್ಯೆಯಲ್ಲಿ ಬಸವಣ್ಣನ ಪಾತ್ರ ಎಂದಿದ್ದಾರೆ. ಸದ್ಯ ಇದು ವೀರಶೈವ ಲಿಂಗಾಯತ ಸಮುದಾಯದವರನ್ನ ಕೆರಳಿಸಿದೆ. ಲೇಖಕ ರವಿ ಹಂಜ್ ಆಕ್ರೋಶ ಹೊರಹಾಕಿದ್ದು, ಪುಸ್ತಕಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಈ ತೀರ್ಮಾನ ಕೈಗೊಂಡಿದೆ.

Published on: Nov 19, 2026 09:04 PM

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More