ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಚಿವ ಸಂಪುಟ ಅನುಮೋದನೆ
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳ ರಚನೆಗೆ ಕರ್ನಾಟಕ ಸಂಪುಟ ಸಭೆ ಅನುಮೋದನೆ ನೀಡಿದೆ. ಪ್ರಸ್ತುತ ಒಂದೇ ಕಮಿಷನರೇಟ್ ಕಾನೂನು ಸುವ್ಯವಸ್ಥೆ ನಿಭಾಯಿಸುವುದು ಕಷ್ಟಕರವಾಗಿತ್ತು. ಹೀಗಾಗಿ ಜಿಬಿಎ ವ್ಯಾಪ್ತಿಯಲ್ಲಿ ಐದು ಪ್ರತ್ಯೇಕ ಪೊಲೀಸ್ ಕಮಿಷನರೇಟ್‌ಗಳನ್ನು ಸ್ಥಾಪಿಸುವ ಪ್ರಸ್ತಾವನೆ ಇತ್ತು. ಈ ಪ್ರಸ್ತಾವನೆಯು ಇಂದು ಸಂಪುಟ ಸಭೆಯಲ್ಲಿ ಚರ್ಚೆಗೆ ಬಂದು ಅಂತಿಮವಾಗಿ ಅನುಮೋದನೆಗೊಂಡಿದೆ.
ಬೆಂಗಳೂರು, ಅಕ್ಟೋಬರ್ 06: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳನ್ನು ರಚಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈವರೆಗೂ ಬೆಂಗಳೂರು ನಗರದ ಕಾನೂನು ಸುವ್ಯವಸ್ಥೆಯನ್ನು ಒಂದೇ ಪೊಲೀಸ್ ಕಮಿಷನರೇಟ್ ಅಡಿಯಲ್ಲಿ ನಿಭಾಯಿಸಲಾಗುತ್ತಿದೆ. ನಗರದ ವಿಸ್ತಾರ ಮತ್ತು ಬೆಳೆಯುತ್ತಿರುವ ಜನಸಂಖ್ಯೆಯಿಂದಾಗಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಸಮರ್ಥವಾಗಿ ಕಾಪಾಡುವುದು ಸವಾಲಾಗಿದೆ. ಹೀಗಾಗಿ ಬಿಬಿಎಂಪಿ ಐದು ಪಾಲಿಕೆಗಳಾಗಿ ವಿಭಜನೆಗೊಂಡಂತೆ, ಜಿಬಿಎ ವ್ಯಾಪ್ತಿಯಲ್ಲಿ ಐದು ಪ್ರತ್ಯೇಕ ಪೊಲೀಸ್ ಕಮಿಷನರೇಟ್‌ಗಳನ್ನು ಸ್ಥಾಪಿಸುವ ಪ್ರಸ್ತಾವನೆ ಇತ್ತು. ಈ ಪ್ರಸ್ತಾವನೆಯು ಇಂದು ಸಂಪುಟ ಸಭೆಯಲ್ಲಿ ಚರ್ಚೆಗೆ ಬಂದು ಅಂತಿಮವಾಗಿ ಅನುಮೋದನೆಗೊಂಡಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

