ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಚಿವ ಸಂಪುಟ ಅನುಮೋದನೆ

Edited By:

Updated on: Oct 06, 2026 | 6:17 PM

ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳ ರಚನೆಗೆ ಕರ್ನಾಟಕ ಸಂಪುಟ ಸಭೆ ಅನುಮೋದನೆ ನೀಡಿದೆ. ಪ್ರಸ್ತುತ ಒಂದೇ ಕಮಿಷನರೇಟ್ ಕಾನೂನು ಸುವ್ಯವಸ್ಥೆ ನಿಭಾಯಿಸುವುದು ಕಷ್ಟಕರವಾಗಿತ್ತು. ಹೀಗಾಗಿ ಜಿಬಿಎ ವ್ಯಾಪ್ತಿಯಲ್ಲಿ ಐದು ಪ್ರತ್ಯೇಕ ಪೊಲೀಸ್ ಕಮಿಷನರೇಟ್‌ಗಳನ್ನು ಸ್ಥಾಪಿಸುವ ಪ್ರಸ್ತಾವನೆ ಇತ್ತು. ಈ ಪ್ರಸ್ತಾವನೆಯು ಇಂದು ಸಂಪುಟ ಸಭೆಯಲ್ಲಿ ಚರ್ಚೆಗೆ ಬಂದು ಅಂತಿಮವಾಗಿ ಅನುಮೋದನೆಗೊಂಡಿದೆ.

ಬೆಂಗಳೂರು, ಅಕ್ಟೋಬರ್​​ 06: ಗ್ರೇಟರ್​​ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳನ್ನು ರಚಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈವರೆಗೂ ಬೆಂಗಳೂರು ನಗರದ ಕಾನೂನು ಸುವ್ಯವಸ್ಥೆಯನ್ನು ಒಂದೇ ಪೊಲೀಸ್ ಕಮಿಷನರೇಟ್ ಅಡಿಯಲ್ಲಿ ನಿಭಾಯಿಸಲಾಗುತ್ತಿದೆ. ನಗರದ ವಿಸ್ತಾರ ಮತ್ತು ಬೆಳೆಯುತ್ತಿರುವ ಜನಸಂಖ್ಯೆಯಿಂದಾಗಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಸಮರ್ಥವಾಗಿ ಕಾಪಾಡುವುದು ಸವಾಲಾಗಿದೆ. ಹೀಗಾಗಿ ಬಿಬಿಎಂಪಿ ಐದು ಪಾಲಿಕೆಗಳಾಗಿ ವಿಭಜನೆಗೊಂಡಂತೆ, ಜಿಬಿಎ ವ್ಯಾಪ್ತಿಯಲ್ಲಿ ಐದು ಪ್ರತ್ಯೇಕ ಪೊಲೀಸ್ ಕಮಿಷನರೇಟ್‌ಗಳನ್ನು ಸ್ಥಾಪಿಸುವ ಪ್ರಸ್ತಾವನೆ ಇತ್ತು. ಈ ಪ್ರಸ್ತಾವನೆಯು ಇಂದು ಸಂಪುಟ ಸಭೆಯಲ್ಲಿ ಚರ್ಚೆಗೆ ಬಂದು ಅಂತಿಮವಾಗಿ ಅನುಮೋದನೆಗೊಂಡಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More