ಜನರಿಗೆ ಎರಡು ಶಾಕ್ ನೀಡಲಿದೆ ಸರ್ಕಾರ: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

Edited By:

Updated on: Oct 06, 2026 | 10:43 PM

ಕರ್ನಾಟಕ ಕ್ಯಾಬಿನೆಟ್ ನಂದಿನಿ ಹಾಲಿನ ದರ ಮತ್ತು ಬಸ್ ಟಿಕೆಟ್ ದರ ಏರಿಕೆಗೆ ಒಪ್ಪಿಗೆ ನೀಡಿದೆ. ಹಾಲಿನ ದರ ಲೀಟರ್‌ಗೆ 8 ರೂಪಾಯಿ ಹೆಚ್ಚಳವಾಗಲಿದ್ದು, ಅಕ್ಟೋಬರ್ 27ರ ನಂತರ ಜಾರಿಗೆ ಬರಲಿದೆ. ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗಿರುವ ಕಾರಣ ಸದ್ಯಕ್ಕೆ ದರ ಏರಿಕೆ ಮುಂದೂಡಲಾಗಿದೆ. ಇದು ಜನಸಾಮಾನ್ಯರಿಗೆ ಮತ್ತಷ್ಟು ಆರ್ಥಿಕ ಹೊರೆಯಾಗಲಿದೆ.

ಬೆಂಗಳೂರು, ಅ.6: ಕರ್ನಾಟಕದಲ್ಲಿ ಹೆಚ್ಚುತ್ತಿರುವ ವಸ್ತುಗಳ ಬೆಲೆಗಳ ನಡುವೆ ಜನಸಾಮಾನ್ಯರಿಗೆ ಮತ್ತೊಂದು ಹೊರೆ ಬೀಳಲಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಂದಿನಿ ಹಾಲು ಮತ್ತು ಬಸ್ ಟಿಕೆಟ್ ದರ ಏರಿಕೆಗೆ ಒಪ್ಪಿಗೆ ದೊರಕಿದೆ. ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಹಾಲು ಉತ್ಪಾದಕರ ಒಕ್ಕೂಟದ ಮನವಿ ಮತ್ತು ಸಿಎಂ ವರದಿ ಆಧರಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ, ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ನೀತಿ ಸಂಹಿತೆ ಅಡ್ಡಿಯಾಗಿದೆ. ಅಕ್ಟೋಬರ್ 27ರಂದು ಚುನಾವಣಾ ಪ್ರಕ್ರಿಯೆ ಮುಗಿದ ನಂತರ ದರ ಹೆಚ್ಚಳ ಜಾರಿಯಾಗುವ ಸಾಧ್ಯತೆ ಇದೆ. ಸದ್ಯಕ್ಕೆ ದರ ಏರಿಕೆಗೆ ಚುನಾವಣಾ ನೀತಿ ಸಂಹಿತೆ ಜಾರಿ ಅಡ್ಡಿಯಾಗಿದೆ. ಅಕ್ಟೋಬರ್ 27ರ ನಂತರವೇ ನಂದಿನಿ ಹಾಲಿನ ದರ ಏರಿಕೆಯಾಗಲಿದೆ. ಇನ್ನು ಬಿಎಂಟಿಸಿ, ಕೆಎಸ್ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳು ಬಸ್ ಟಿಕೆಟ್ ದರ ಏರಿಕೆಗೆ ಪಟ್ಟು ಹಿಡಿದಿದ್ದು, ಈ ವಿಷಯ ಕೂಡ ಸಂಪುಟದಲ್ಲಿ ಚರ್ಚೆಗೆ ಬಂದಿದೆ. ಇದಕ್ಕೂ ಸಹ ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗಿರುವ ಕಾರಣ, ಸಿಎಂ ವಿವೇಚನೆಗೆ ಬಿಡಲಾಗಿದೆ. ದಸರಾ ಮತ್ತು ದೀಪಾವಳಿ ನಡುವೆ ದರ ಏರಿಕೆಯ ಶಾಕ್ ಜನರಿಗೆ ತಟ್ಟುವ ನಿರೀಕ್ಷೆಯಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
TV9 Web

TV9 Kannada

Read More