28 ಕೈದಿಗಳಿಗೆ ಬಿಡುಗಡೆ ಭಾಗ್ಯ: ಸನ್ನಡತೆ ಆಧಾರದಲ್ಲಿ ರಿಲೀಸ್​ಗೆ ಸಚಿವ ಸಂಪುಟ ಅಸ್ತು

Updated on: Aug 22, 2026 | 6:30 AM

ಸನ್ನಡತೆ ಆಧಾರದಲ್ಲಿ 29 ಜೀವಾವಧಿ ಶಿಕ್ಷಾ ಬಂಧಿಗಳ ಅವಧಿಪೂರ್ವ ಬಿಡುಗಡೆಗೆ ಕರ್ನಾಟಕ ಸಚಿವ ಸಂಪುಟ ಅಸ್ತು ಎಂದಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಈ ಕುರಿತು ಪ್ರಕಟಣೆ ಹೊರಡಿಸಿದ್ದು, 45 ಪ್ರಕರಣಗಳ ಪೈಕಿ 29 ಬಂಧಿತರ ಬಿಡುಗಡೆಗೆ ಅನುಮೋದನೆ ನೀಡಲಾಗಿದೆ. ಈ ನಿರ್ಧಾರವು ರಾಜ್ಯಪಾಲರ ಅಂತಿಮ ಅನುಮೋದನೆಗಾಗಿ ಕಾಯುತ್ತಿದೆ.

ಬೆಂಗಳೂರು, ಆಗಸ್ಟ್ 22: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 29 ಮಂದಿ ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಅವಧಿಪೂರ್ವ ಬಿಡುಗಡೆ ಮಾಡಲು ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಈ ಮಹತ್ವದ ನಿರ್ಧಾರದ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಪ್ರಾರಂಭದಲ್ಲಿ 45 ಪ್ರಕರಣಗಳ ಪರಿಶೀಲನೆ ನಡೆಸಲಾಗಿದ್ದು, ಅದರಲ್ಲಿ 28 ಬಂಧಿತರ ಬಿಡುಗಡೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿತ್ತು. ನಂತರ, ಒಂದು ಪ್ರಕರಣದಲ್ಲಿ ಕೇಂದ್ರ ಗೃಹ ಸಚಿವಾಲಯದ ಒಪ್ಪಿಗೆಯೂ ಲಭ್ಯವಾಗಿದ್ದು, ಒಟ್ಟು 29 ಜೀವಾವಧಿ ಶಿಕ್ಷಾ ಬಂಧಿಗಳು ಅವಧಿಪೂರ್ವ ಬಿಡುಗಡೆಗೆ ಅರ್ಹರಾಗಿದ್ದಾರೆ. ಕೈದಿಗಳ ಜೈಲು ವಾಸದ ಅವಧಿ, ಅವರ ನಡವಳಿಕೆ ಮತ್ತು ನಿಗದಿತ ಮಾನದಂಡಗಳನ್ನು ಆಧರಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಸಚಿವ ಸಂಪುಟದ ಈ ತೀರ್ಮಾನವನ್ನು ಈಗ ರಾಜ್ಯಪಾಲರ ಅನುಮೋದನೆಗಾಗಿ ಕಳುಹಿಸಲಾಗಿದೆ. ರಾಜ್ಯಪಾಲರ ಅಂತಿಮ ಅಂಕಿತ ದೊರೆತ ನಂತರ ಜೈಲಿನಿಂದ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More