AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ, ದೀಪಾವಳಿ ಹೊತ್ತಲ್ಲೇ ಜನರಿಗೆ ಬೆಲೆ ಏರಿಕೆ ಶಾಕ್: ಪ್ರತಿ ಲೀ ಹಾಲಿನ ದರ 8 ರೂ. ಹೆಚ್ಚಳ

ದಸರಾ, ದೀಪಾವಳಿ ಹೊತ್ತಲ್ಲೇ ಜನರಿಗೆ ಬೆಲೆ ಏರಿಕೆ ಶಾಕ್: ಪ್ರತಿ ಲೀ ಹಾಲಿನ ದರ 8 ರೂ. ಹೆಚ್ಚಳ

ಪ್ರಸನ್ನ ಗಾಂವ್ಕರ್​
| Edited By: |

Updated on:Oct 06, 2026 | 6:06 PM

Share

ಕರ್ನಾಟಕದಲ್ಲಿ ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೊನೆ ಒಂದು ಅಂತಿಮ ನಿರ್ಧಾರಕ್ಕೆ ಬಂದಿದೆ. ಪ್ರತಿ ಲೀಟರ್ ಹಾಲಿನ ದರ 10ರಿಂದ 12 ರೂಪಾಯಿ ಹೆಚ್ಚಿಸಬೇಕೆಂದು ಹಾಲು ಮಾರಾಟ ಒಕ್ಕೂಟಗಳು ಮನವಿ ಮಾಡಿದ್ದವು. ಆದ್ರೆ. ಇದೀಗ ಸರ್ಕಾರ ಅಳೆದು ತೂಗಿ ಪ್ರತಿ ಲೀಟರ್​​ಗೆ 8 ರೂ. ಹೆಚ್ಚಳ ಮಾಡಲು ತೀರ್ಮಾನಿಸಿದೆ.

ಬೆಂಗಳೂರು, (ಅಕ್ಟೋಬರ್ 06): ಕರ್ನಾಟಕದಲ್ಲಿ ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೊನೆ ಒಂದು ಅಂತಿಮ ನಿರ್ಧಾರಕ್ಕೆ ಬಂದಿದೆ. ಪ್ರತಿ ಲೀಟರ್ ಹಾಲಿನ ದರ 10 ರೂಪಾಯಿ ಹೆಚ್ಚಿಸಬೇಕೆಂದು ಹಾಲು ಮಾರಾಟ ಒಕ್ಕೂಟಗಳು ಮನವಿ ಮಾಡಿದ್ದವು. ಆದ್ರೆ. ಇದೀಗ ಸರ್ಕಾರ ಅಳೆದು ತೂಗಿ ಪ್ರತಿ ಲೀಟರ್​​ಗೆ 8 ರೂ. ಹೆಚ್ಚಳ ಮಾಡಲು ತೀರ್ಮಾನಿಸಿದೆ. ಈ ಸಂಬಂಧ ಇಂದು (ಅಕ್ಟೋಬರ್ 06) ನಡೆದ ಸಚಿವ ಸಂಪುಟದಲ್ಲಿ ಹಾಲಿನ ದರ ಏರಿಕೆ ಬಗ್ಗೆ ಚರ್ಚೆಯಾಗಿದ್ದು, ದರ ಎಷ್ಟು ಹೆಚ್ಚಳ ಎನ್ನುವುದನ್ನು ತೀರ್ಮಾನಿಸಲು ಸಿಎಂ ವಿವೇಚನೆಗೆ ಬಿಡಲಾಯ್ತು. ಇನ್ನು ಸಿಎಂ ಡಿಕೆ ಶಿವಕುಮಾರ್ 10. 12 ರೂಪಾಯಿ ಬೇಡ. 8 ರೂಪಾಯಿ ಏರಿಕೆಗೆ ಒಲವು ತೋರಿದ್ದು, ಇದಕ್ಕೆ ಸಚಿವ ಸಂಪುಟ ಸಹ ಸಮ್ಮತಿಸಿದೆ. ಆದ್​ರೆ, ಸದ್ಯ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಾಗಿ ಚುನಾವಣಾ ಆಯೋಗದ ಅನುಮತಿ ಪಡೆದು ದರ ಹೆಚ್ಚಳದ ಬಗ್ಗೆ ಅಧಿಕೃತ ಆದೇಶ ಹೊರಡಿಸಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 06, 2026 05:58 PM

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More