ದಸರಾ, ದೀಪಾವಳಿ ಹೊತ್ತಲ್ಲೇ ಜನರಿಗೆ ಬೆಲೆ ಏರಿಕೆ ಶಾಕ್: ಪ್ರತಿ ಲೀ ಹಾಲಿನ ದರ 8 ರೂ. ಹೆಚ್ಚಳ
ಕರ್ನಾಟಕದಲ್ಲಿ ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೊನೆ ಒಂದು ಅಂತಿಮ ನಿರ್ಧಾರಕ್ಕೆ ಬಂದಿದೆ. ಪ್ರತಿ ಲೀಟರ್ ಹಾಲಿನ ದರ 10ರಿಂದ 12 ರೂಪಾಯಿ ಹೆಚ್ಚಿಸಬೇಕೆಂದು ಹಾಲು ಮಾರಾಟ ಒಕ್ಕೂಟಗಳು ಮನವಿ ಮಾಡಿದ್ದವು. ಆದ್ರೆ. ಇದೀಗ ಸರ್ಕಾರ ಅಳೆದು ತೂಗಿ ಪ್ರತಿ ಲೀಟರ್ಗೆ 8 ರೂ. ಹೆಚ್ಚಳ ಮಾಡಲು ತೀರ್ಮಾನಿಸಿದೆ.
ಬೆಂಗಳೂರು, (ಅಕ್ಟೋಬರ್ 06): ಕರ್ನಾಟಕದಲ್ಲಿ ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೊನೆ ಒಂದು ಅಂತಿಮ ನಿರ್ಧಾರಕ್ಕೆ ಬಂದಿದೆ. ಪ್ರತಿ ಲೀಟರ್ ಹಾಲಿನ ದರ 10 ರೂಪಾಯಿ ಹೆಚ್ಚಿಸಬೇಕೆಂದು ಹಾಲು ಮಾರಾಟ ಒಕ್ಕೂಟಗಳು ಮನವಿ ಮಾಡಿದ್ದವು. ಆದ್ರೆ. ಇದೀಗ ಸರ್ಕಾರ ಅಳೆದು ತೂಗಿ ಪ್ರತಿ ಲೀಟರ್ಗೆ 8 ರೂ. ಹೆಚ್ಚಳ ಮಾಡಲು ತೀರ್ಮಾನಿಸಿದೆ. ಈ ಸಂಬಂಧ ಇಂದು (ಅಕ್ಟೋಬರ್ 06) ನಡೆದ ಸಚಿವ ಸಂಪುಟದಲ್ಲಿ ಹಾಲಿನ ದರ ಏರಿಕೆ ಬಗ್ಗೆ ಚರ್ಚೆಯಾಗಿದ್ದು, ದರ ಎಷ್ಟು ಹೆಚ್ಚಳ ಎನ್ನುವುದನ್ನು ತೀರ್ಮಾನಿಸಲು ಸಿಎಂ ವಿವೇಚನೆಗೆ ಬಿಡಲಾಯ್ತು. ಇನ್ನು ಸಿಎಂ ಡಿಕೆ ಶಿವಕುಮಾರ್ 10. 12 ರೂಪಾಯಿ ಬೇಡ. 8 ರೂಪಾಯಿ ಏರಿಕೆಗೆ ಒಲವು ತೋರಿದ್ದು, ಇದಕ್ಕೆ ಸಚಿವ ಸಂಪುಟ ಸಹ ಸಮ್ಮತಿಸಿದೆ. ಆದ್ರೆ, ಸದ್ಯ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಾಗಿ ಚುನಾವಣಾ ಆಯೋಗದ ಅನುಮತಿ ಪಡೆದು ದರ ಹೆಚ್ಚಳದ ಬಗ್ಗೆ ಅಧಿಕೃತ ಆದೇಶ ಹೊರಡಿಸಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Oct 06, 2026 05:58 PM
Loading...
Unable to load recommendations.
Follow Us
