ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಅಜಯ್ ಸಿಂಗ್‌ಗೆ ಸಚಿವ ಸ್ಥಾನ, ತಾಯಿ ಪ್ರಭಾವತಿ ಧರ್ಮಸಿಂಗ್ ಕಣ್ಣೀರು
ಜೇವರ್ಗಿಯ ಶಾಸಕ ಅಜಯ್ ಸಿಂಗ್‌ಗೆ ಸಚಿವ ಸ್ಥಾನ ಲಭಿಸಿದ್ದು, ತಾಯಿ ಪ್ರಭಾವತಿ ಧರ್ಮಸಿಂಗ್ ಸಂತೋಷದ ಕಣ್ಣೀರನ್ನ ಸುರಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಪುತ್ರನಿಗೆ ಸಚಿವಗಿರಿ ಸಿಕ್ಕಿದ ಹಿನ್ನೆಲೆಯಲ್ಲಿ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಬೆಂಗಳೂರು ಹೊರತುಪಡಿಸಿದರೆ, ಕಲಬುರಗಿಗೆ ಮೂರು ಸಚಿವ ಸ್ಥಾನಗಳ ಮೂಲಕ ಈ ಬಾರಿ ಬಂಪರ್ ಲಭಿಸಿದೆ.
ಕಲಬುರಗಿ, ಆಗಸ್ಟ್ 03: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಲ್ಲಿ ಜೇವರ್ಗಿಯ ಶಾಸಕ ಅಜಯ್ ಸಿಂಗ್‌ಗೆ ಸಚಿವ ಸ್ಥಾನ ಲಭಿಸಿದ್ದು, ಇದು ಅವರ ಕುಟುಂಬದಲ್ಲಿ ಹರ್ಷ ತಂದಿದೆ. ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಸುದ್ದಿ ತಿಳಿಯುತ್ತಿದ್ದಂತೆ ಅಜಯ್ ಸಿಂಗ್ ಅವರ ತಾಯಿ ಪ್ರಭಾವತಿ ಧರ್ಮಸಿಂಗ್ ಅವರು ಆನಂದಭಾಷ್ಪ ಸುರಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆಯಲ್ಲಿ ಕಲಬುರಗಿ ಜಿಲ್ಲೆಗೆ ವಿಶೇಷ ಪ್ರಾಮುಖ್ಯತೆ ಲಭಿಸಿದೆ. ಬೆಂಗಳೂರನ್ನು ಹೊರತುಪಡಿಸಿದರೆ ಅತಿ ಹೆಚ್ಚು ಸಚಿವ ಸ್ಥಾನಗಳನ್ನು ಪಡೆದ ಜಿಲ್ಲೆ ಕಲಬುರಗಿಯಾಗಿದೆ. ಅಜಯ್ ಸಿಂಗ್ ಜೊತೆಗೆ ಪ್ರಿಯಾಂಕ್ ಖರ್ಗೆ ಮತ್ತು ಸೇಡಂ ಶಾಸಕ ಶರಣಪ್ರಕಾಶ್ ಪಾಟೀಲ್ ಕೂಡ ಸಚಿವರಾಗಿದ್ದಾರೆ. ಇದರಿಂದ ಕಲಬುರಗಿಗೆ ಒಟ್ಟು ಮೂರು ಸಚಿವ ಸ್ಥಾನಗಳು ದೊರೆತಂತಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
