ಸಚಿವ ಸಂಪುಟ ವಿಸ್ತರಣೆ ಜಟಾಪಟಿ: ದೆಹಲಿಗೆ ತೆರಳುವ ಮುನ್ನ ಬಿಕೆ ಹರಿಪ್ರಸಾದ್ ಏನಂದ್ರು ನೋಡಿ​​

Edited By:

Updated on: Jul 15, 2026 | 9:48 PM

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಪಕ್ಷ ಸಂಘಟನೆ ವಿಚಾರವಾಗಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಎಐಸಿಸಿ ಮತ್ತು ಕೆಪಿಸಿಸಿ ವತಿಯಿಂದ ನಡೆಯುತ್ತಿರುವ ಸಂಘಟನ್ ಸರ್ಜಾನ್ ಅಭಿಯಾನ್ ಕುರಿತು ಚರ್ಚೆ ನಡೆಸುವುದು ಪ್ರಮುಖ ಉದ್ದೇಶ. ಕರ್ನಾಟಕದಲ್ಲಿ ಈ ಅಭಿಯಾನವನ್ನು ಪ್ರಾರಂಭಿಸುವ ಬಗ್ಗೆ ಘೋಷಣೆ ಮಾಡಿದ್ದು, ಇದರ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ ನಡೆಯಲಿದೆ.

ದೇವನಹಳ್ಳಿ, ಜುಲೈ 15: ಸಿಎಂ ಡಿಕೆ ಶಿವಕುಮಾರ್​ ಸಚಿವ ಸಂಪುಟ ವಿಸ್ತರಣೆಗೆ ಮತ್ತೆ ಕೌಂಟ್​ಡೌನ್ ಶುರುವಾಗಿದೆ. ಈಗಾಗಲೇ ಹಲವು ಸಚಿವಾಕಾಂಕ್ಷಿಗಳು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಇನ್ನು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್​​​ ಇಂದು 5:20ರ ವಿಮಾನದಲ್ಲಿ ಕೆಂಪೇಗೌಡ ಏರ್ ಪೋರ್ಟ್​ನಿಂದ ದೆಹಲಿಗೆ ಪ್ರಯಾಣ ಬೆಳೆಸಿದರು. ಅದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘‘ಎಲ್ಲಾ ಶಾಸಕರಿಗೂ, ಕೇಳಲಿಕ್ಕೆ, ಹೇಳುವುದಕ್ಕೆ ಹಕ್ಕಿದೆ. ಅದರ ತೀರ್ಮಾನವನ್ನ ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಆ ವಿಚಾರವನ್ನ ಬಹಳಕೂಲಂಕಷವಾಗಿ ನೋಡಿ ತೀರ್ಮಾನ ಮಾಡುತ್ತದೆ. ಎಲ್ಲಾ ವಿಚಾರಗಳು ಕೂಡ ಉಸ್ತುವಾರಿ ಸುರ್ಜೇವಾಲ ಅವರ ಬಳಿ ಇದೆ, ಅವರು ಚರ್ಚೆ ಮಾಡಿದಾಗ ಗೊತ್ತಾಗುತ್ತದೆ’’ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More