AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಪ್ರಯಾಣಕ್ಕೂ ಮುನ್ನ ಸಿದ್ದರಾಮಯ್ಯರನ್ನು ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್: ಸಂಪುಟ ವಿಸ್ತರಣೆ ಬಗ್ಗೆ ಸುದೀರ್ಘ ಚರ್ಚೆ

ದೆಹಲಿ ಪ್ರಯಾಣಕ್ಕೂ ಮುನ್ನ ಸಿದ್ದರಾಮಯ್ಯರನ್ನು ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್: ಸಂಪುಟ ವಿಸ್ತರಣೆ ಬಗ್ಗೆ ಸುದೀರ್ಘ ಚರ್ಚೆ

ಅನಿಲ್​ ಕಲ್ಕೆರೆ
| Edited By: |

Updated on: Jul 15, 2026 | 6:08 PM

Share

ಕರ್ನಾಟಕದಲ್ಲಿ ಸಂಪುಟ ವಿಸ್ತರಣೆ ಚಟುವಟಿಕೆಗಳು ಗರಿಗೆದರಿದ್ದು, ದೆಹಲಿಗೆ ಹೊರಡುವ ಮುನ್ನ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತುಕತೆ ನಡೆಸಿದ್ದಾರೆ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮತ್ತು ಬಿ.ಕೆ. ಹರಿಪ್ರಸಾದ್ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಹೈಕಮಾಂಡ್ ನಾಯಕರೊಂದಿಗೆ ಸಂಪುಟ ವಿಸ್ತರಣೆ ಕುರಿತು ಮಹತ್ವದ ಚರ್ಚೆ ನಡೆಸಲಿದ್ದಾರೆ.

ಬೆಂಗಳೂರು, ಜುಲೈ 15: ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ನಡೆದ ಈ ಭೇಟಿಯಲ್ಲಿ ಸಂಪುಟ ವಿಸ್ತರಣೆ ಕುರಿತು ಪ್ರಾಥಮಿಕ ಸಮಾಲೋಚನೆ ನಡೆಸಲಾಗಿದೆ. ಉಭಯ ನಾಯಕರು 40 ನಿಮಿಷಕ್ಕೂ ಹೆಚ್ಚು ಕಾಲ ಒನ್ ಟು ಒನ್ ಮಾತುಕತೆ ನಡೆಸಿದ್ದು, ಕಾವೇರಿ ನಿವಾಸದಲ್ಲಿ ಸುದೀರ್ಘ ಚರ್ಚೆ ನಡೆದಿದೆ. ಇಂದು ಸಂಜೆ ಒಂದೇ ವಿಮಾನದಲ್ಲಿ ಹಾಲಿ ಮತ್ತು ಮಾಜಿ ಸಿಎಂ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಸಂಬಂಧ ನಾಳೆ ಮೊದಲ ಹಂತದ ಮಾತುಕತೆ ದೆಹಲಿಯಲ್ಲಿ ನಡೆಯುವ ನಿರೀಕ್ಷೆಯಿದೆ. ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್, ರಣದೀಪ್ ಸುರ್ಜೇವಾಲಾ, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಮತ್ತು ಬಿ.ಕೆ. ಹರಿಪ್ರಸಾದ್ ಭಾಗವಹಿಸಲಿದ್ದಾರೆ. ರಾಹುಲ್ ಗಾಂಧಿ ಅವರ ಅನುಪಸ್ಥಿತಿಯಲ್ಲಿ ಮೊದಲ ಹಂತದ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಅನಿಲ್​ ಕಲ್ಕೆರೆ
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More