ರಾಹುಲ್ ಸಭೆ ಅಂತ್ಯ, ಬೆಂಗಳೂರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು?

Updated on: Jul 30, 2026 | 8:12 PM

ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಅಂತಿಮ ಘಟ್ಟ ತಲುಪಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಇಂದು (ಜುಲೈ 30) ರಾಹುಲ್ ಗಾಂಧಿ ರಾಜ್ಯ ನಾಯಕರ ಜೊತೆ ಸಭೆ ಮಾಡಿದರು. ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಬಿಕೆ ಹರಿಪ್ರಸಾದ್, ಕೆಸಿ ವೇಣುಗೋಪಾಲ್, ಸುರ್ಜೆವಾಲ ಹಾಗೂ ಮಲ್ಲಿಕಾರ್ಜುನ ಖರ್ಗೆ ಸಭೆಯಲ್ಲಿ ಭಾಗಿಯಾಗಿದ್ದು, ನೂತನ ಸಚಿವರ ಪಟ್ಟಿ ಬಗ್ಗೆ ಮಾತುಕತೆ ನಡೆಸಿದ್ದಾರೆ. ಇದೀಗ ಸಭೆ ಅಂತ್ಯವಾಗಿದ್ದು, ಡಿಕೆ ಶಿವಕುಮಾರ್ ನಾಲ್ಕು ದಿನಗಳ ಬಳಿಕ ಇವತ್ತು ರಾತ್ರಿಯೇ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಆದ್ರೆ, ನೂತನ ಸಚಿವ ಪಟ್ಟಿ ಮಾತ್ರ ಇನ್ನೂ ನಿಗೂಢವಾಗಿದೆ.

ನವದೆಹಲಿ, (ಜುಲೈ 30): ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ (Karnataka Cabinet Expansion) ಅಂತಿಮ ಘಟ್ಟ ತಲುಪಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಇಂದು (ಜುಲೈ 30) ರಾಹುಲ್ ಗಾಂಧಿ (Rahul Gandhi) ರಾಜ್ಯ ನಾಯಕರ ಜೊತೆ ಸಭೆ ಮಾಡಿದರು. ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಬಿಕೆ ಹರಿಪ್ರಸಾದ್, ಕೆಸಿ ವೇಣುಗೋಪಾಲ್, ಸುರ್ಜೆವಾಲ ಹಾಗೂ ಮಲ್ಲಿಕಾರ್ಜುನ ಖರ್ಗೆ ಸಭೆಯಲ್ಲಿ ಭಾಗಿಯಾಗಿದ್ದು, ನೂತನ ಸಚಿವರ ಪಟ್ಟಿ ಬಗ್ಗೆ ಮಾತುಕತೆ ನಡೆಸಿದ್ದಾರೆ. ಇದೀಗ ಸಭೆ ಅಂತ್ಯವಾಗಿದ್ದು, ಡಿಕೆ ಶಿವಕುಮಾರ್ ನಾಲ್ಕು ದಿನಗಳ ಬಳಿಕ ಇವತ್ತು ರಾತ್ರಿಯೇ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಆದ್ರೆ, ನೂತನ ಸಚಿವ ಪಟ್ಟಿ ಮಾತ್ರ ಇನ್ನೂ ನಿಗೂಢವಾಗಿದೆ.

ಯಾಕಂದ್ರೆ ರಾಹುಲ್ ಗಾಂಧಿ ಅವರು ರಾಜ್ಯ ನಾಯಕರೊಂದಿಗಿನ ಸಭೆ ಬಳಿಕ ಖರ್ಗೆ, ಸುರ್ಜೆವಾಲ, ವೇಣುಗೋಪಾಲ್ ಜೊತೆ ಚರ್ಚೆ ಮುಂದುವರೆಸಿದ್ದು, ಪಟ್ಟಿ ಫೈನಲ್ ಮಾಡಿ ಭಾನುವಾರ ರಾತ್ರಿ ರವಾನಿಸುವ ಸಾಧ್ಯತೆಗಳಿವೆ. ಅಥವಾ ಕೆಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರು  ಅಂತಿಮ ಪಟ್ಟಿಯೊಂದಿಗೆ ಭಾನುವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ ಎನ್ನಲಾಗಿದೆ.  ಹೀಗಾಗಿ  ಸಂಪುಟ ವಿಸ್ತರಣೆ ಸಂಬಂಧ ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲೇ ಬೀಡು ಬಿಟ್ಟಿದ್ದ ಸಿಎಂ ಡಿಕೆ ಶಿವಕುಮಾರ್ ಇಂದು ರಾತ್ರಿಯೇ ಬೆಂಗಳೂರಿಗೆ ವಾಪಸ್ ಆಗಲಿದ್ದು, ಆಗಸ್ಟ್ 3ರಂದು ಸೋಮವಾರ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯುವ ಸಾಧ್ಯತೆಗಳಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 30, 2026 08:01 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More