ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆ ಮೇಲೆ ನೂತನ ಸಚಿವರ ಕಣ್ಣು: ಸಮಾಜ ಕಲ್ಯಾಣ ಇಲಾಖೆಗಾಗಿ ಭಾರಿ ಪೈಪೋಟಿ

Edited By:

Updated on: Aug 05, 2026 | 2:10 PM

ಸಂಪುಟ ವಿಸ್ತರಣೆ ಬೆನ್ನಲ್ಲೇ ಕರ್ನಾಟಕದಲ್ಲಿ ಖಾತೆ ಹಂಚಿಕೆಗೆ ತೀವ್ರ ಪೈಪೋಟಿ ನಡೆದಿದೆ. ಸಮಾಜ ಕಲ್ಯಾಣ ಇಲಾಖೆಗೆ ಕೆ.ಹೆಚ್. ಮುನಿಯಪ್ಪ, ಪಿ.ಎಂ. ನರೇಂದ್ರ ಸ್ವಾಮಿ, ಶಿವರಾಜ್ ತಂಗಡಗಿ ಸೇರಿದಂತೆ ಹಲವರು ಲಾಬಿ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳ ಬಳಿ ಇನ್ನೂ 18 ಖಾತೆಗಳು ಬಾಕಿ ಇವೆ. ಹೈಕಮಾಂಡ್ ಇಂದು ಸಂಜೆ ಅಥವಾ ನಾಳೆ ಅಂತಿಮ ನಿರ್ಧಾರ ಪ್ರಕಟಿಸುವ ನಿರೀಕ್ಷೆಯಿದೆ.

ಬೆಂಗಳೂರು, ಆಗಸ್ಟ್​ 05: ಸಂಪುಟ ವಿಸ್ತರಣೆಯಾದ ಎರಡು ದಿನಗಳ ನಂತರವೂ ಕರ್ನಾಟಕದಲ್ಲಿ ಖಾತೆ ಹಂಚಿಕೆ ಅಂತಿಮವಾಗಿಲ್ಲ. ಸಚಿವರು ಪ್ರಬಲ ಖಾತೆಗಳಿಗಾಗಿ ತೀವ್ರ ಲಾಬಿ ನಡೆಸುತ್ತಿದ್ದಾರೆ. ವಿಶೇಷವಾಗಿ, ಸಮಾಜ ಕಲ್ಯಾಣ ಇಲಾಖೆಯ ಮೇಲೆ ಹಲವು ಪ್ರಮುಖ ನಾಯಕರು ಕಣ್ಣಿಟ್ಟಿದ್ದಾರೆ. ಆಹಾರ ಖಾತೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು ತಮ್ಮ ಹಾಲಿ ಖಾತೆಯನ್ನು ಬದಲಿಸಿ ಸಮಾಜ ಕಲ್ಯಾಣ ಇಲಾಖೆಯನ್ನು ಪಡೆಯಲು ಹೈಕಮಾಂಡ್ ಮಟ್ಟದಲ್ಲಿ ಲಾಬಿ ಮಾಡುತ್ತಿದ್ದಾರೆ. ಇದೇ ಖಾತೆಗೆ ಪಿ.ಎಂ. ನರೇಂದ್ರ ಸ್ವಾಮಿ ಹಾಗೂ ಮಾಜಿ ಸಚಿವರಾದ ಶಿವರಾಜ್ ತಂಗಡಗಿ ಸಹ ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More