‘ಮಾತೆರೆಗ್​ಲ ಸೊಲ್ಮೆಲು’: ಸೆಪ್ಟೆಂಬರ್​ 18ರಂದು ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ, ಡಿಕೆಶಿ ವಿಡಿಯೋ ಸಂದೇಶ

Updated on: Sep 15, 2026 | 8:32 AM

ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಒತ್ತು ನೀಡಿರುವ ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಬಂದರು, ಮೂಲಸೌಕರ್ಯ, ಮೀನುಗಾರಿಕೆ, ಕೈಗಾರಿಕೆ ಸೇರಿದಂತೆ ಹಲವು ಕ್ಷೇತ್ರಗಳ ಅಭಿವೃದ್ಧಿ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ. ಈ ಬಗ್ಗೆ ಡಿಕೆಶಿ ಬಿಡುಗಡೆ ಮಾಡಿರುವ ವಿಡಿಯೋ ಸಂದೇಶ ಇಲ್ಲಿದೆ.

ಬೆಂಗಳೂರು, ಸೆಪ್ಟೆಂಬರ್ 15: ಕರಾವಳಿ ಜಿಲ್ಲೆಗಳ, ವಿಶೇಷವಾಗಿ ತುಳು ನಾಡಿನ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸಿಎಂ ಡಿಕೆ ಶಿವಕುಮಾರ್ ಸಚಿವ ಸಂಪುಟ ಸೆಪ್ಟೆಂಬರ್ 18 ರಂದು ಮಂಗಳೂರಿನಲ್ಲಿ ವಿಶೇಷ ಸಭೆ ಆಯೋಜಿಸಿದೆ. ಈ ವಿಚಾರವಾಗಿ ಇದೀಗ ಡಿಕೆ ಶಿವಕುಮಾರ್ ಎಕ್ಸ್ ತಾಣದ ಮೂಲಕ ವಿಡಿಯೋ ಸಂದೇಶ ಹರಿಬಿಟ್ಟು, ಮಾಹಿತಿ ನೀಡಿದ್ದಾರೆ. ಕರಾವಳಿ ಭಾಗದ ಜನರ ಬಹುಕಾಲದ ಆಶೋತ್ತರಗಳನ್ನು ಈಡೇರಿಸಲು, ಇದೇ ಸೆಪ್ಟೆಂಬರ್ 18ರಂದು ಕಡಲನಗರಿ ಮಂಗಳೂರಿನಲ್ಲಿ ನಮ್ಮ ಸರ್ಕಾರದ ವಿಶೇಷ ಸಚಿವ ಸಂಪುಟ ಸಭೆ ಆಯೋಜಿಸಿದ್ದೇವೆ ಎಂದು ಅವರು ಉಲ್ಲೇಖಿಸಿದ್ದಾರೆ.

ಕರಾವಳಿಯ ಜನರ ಕಷ್ಟ-ಸುಖಗಳನ್ನು ಹತ್ತಿರದಿಂದ ಕಂಡು, ಸ್ಥಳೀಯ ಅಗತ್ಯಗಳಿಗೆ ತಕ್ಕಂತೆ ಸ್ಥಳದಲ್ಲೇ ನಿರ್ಧಾರ ಕೈಗೊಳ್ಳುವುದು ನಮ್ಮ ಉದ್ದೇಶ. ಬಂದರು, ಮೂಲಸೌಕರ್ಯ, ಮೀನುಗಾರಿಕೆ ಮತ್ತು ಕೈಗಾರಿಕಾ ರಂಗಗಳಿಗೆ ನವಚೈತನ್ಯ ತುಂಬುವ ಮೂಲಕ ಕರಾವಳಿಯ ಸಮೃದ್ಧಿಗೆ ಹೊಸ ಮುನ್ನುಡಿ ಬರೆಯಲು ‘ಟೀಮ್ ಕರ್ನಾಟಕ’ ಸಜ್ಜಾಗಿದೆ ಎಂದು ಡಿಕೆಶಿ ವಿಡಿಯೋ ಸಂದೇಶದ ಜತೆ ಬರೆದುಕೊಂಡಿದ್ದಾರೆ. ವಿಡಿಯೋ ಸಂದೇಶದ ಕೊನೆಯಲ್ಲಿ ‘ಮಾತೆರೆಗ್​ಲ ಸೊಲ್ಮೆಲು (ಎಲ್ಲರಿಗೂ ವಂದನೆಗಳು)’ ಎಂದು ತುಳು ಭಾಷೆಯಲ್ಲೇ ಸಿಎಂ ಹೇಳಿದ್ದಾರೆ.

Video courtesy: DK Shivakumar X Account

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More