ಜೋರಾದ ಖಾತೆ ಹಂಚಿಕೆ ಕಸರತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಸಿಎಂ ಡಿಕೆ ಶಿವಕುಮಾರ್ ಗಂಭೀರ ಚರ್ಚೆ

Updated on: Aug 08, 2026 | 9:27 AM

ಸಚಿವ ಸಂಪುಟ ವಿಸ್ತರಣೆ ಬಳಿಕ ಕರ್ನಾಟಕದಲ್ಲಿ ಖಾತೆ ಹಂಚಿಕೆ ಕಸರತ್ತು ತೀವ್ರಗೊಂಡಿದೆ. ನೂತನ ಮತ್ತು ಹಾಲಿ ಸಚಿವರು ಪ್ರಬಲ ಖಾತೆಗಳಿಗೆ ಪಟ್ಟು ಹಿಡಿದಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಮಾತುಕತೆ ನಡೆಸುತ್ತಿದ್ದಾರೆ. ಡಿಕೆಶಿ ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ತೆರಳುತ್ತಿದ್ದು, ಸಮಾಜ ಕಲ್ಯಾಣ, ಹಣಕಾಸು, ವಸತಿ ಸೇರಿದಂತೆ ಹಲವು ಖಾತೆಗಳಿಗೆ ಜಿದ್ದಾಜಿದ್ದಿ ಶುರುವಾಗಿದೆ.

ಬೆಂಗಳೂರು, ಆಗಸ್ಟ್ 8: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ನಂತರ ಈಗ ಖಾತೆ ಹಂಚಿಕೆ ಕಸರತ್ತು ಜೋರಾಗಿದೆ. ಪ್ರಬಲ ಖಾತೆಗಳಿಗಾಗಿ ಸಚಿವರ ಮಧ್ಯೆ ಜಿದ್ದಾಜಿದ್ದಿ ಶುರುವಾಗಿದ್ದು, ಈ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಹಾಲಿ ಸಿಎಂ ಡಿಕೆ ಶಿವಕುಮಾರ್‌ಗೆ ಮಾತುಕತೆ ನಡೆಸಿದ್ದಾರೆ. ಸಿದ್ದರಾಮಯ್ಯ ಜತೆ ಚರ್ಚೆ ನಡೆಸಿದ ನಂತರ, ಡಿಕೆ ಶಿವಕುಮಾರ್ ವರಿಷ್ಠರನ್ನು ಭೇಟಿಯಾಗಲು ದೆಹಲಿಗೆ ತೆರಳುತ್ತಿದ್ದಾರೆ.

ಹೊಸದಾಗಿ ಸಚಿವರಾದವರು ಇಂಥದ್ದೇ ಖಾತೆ ಬೇಕೆಂದು ಪಟ್ಟು ಹಿಡಿದಿದ್ದರೆ, ಮೊದಲ ಸುತ್ತಿನಲ್ಲಿ ಸಚಿವರಾದವರು ತಮ್ಮ ಖಾತೆ ಬದಲಾವಣೆಗೆ ಬೇಡಿಕೆ ಇಡುತ್ತಿದ್ದಾರೆ. ಬಸವರಾಜ್ ರಾಯರೆಡ್ಡಿ ಹಣಕಾಸು ಖಾತೆ ಕೇಳಿದ್ದರೆ, ಹೆಚ್.ಸಿ. ಬಾಲಕೃಷ್ಣ ಸಣ್ಣ ನೀರಾವರಿ ಇಲಾಖೆಯ ಮೇಲೆ ಕಣ್ಣಿಟ್ಟಿದ್ದಾರೆ. ಸಮಾಜ ಕಲ್ಯಾಣ ಇಲಾಖೆಗಾಗಿ ಕೆ.ಹೆಚ್. ಮುನಿಯಪ್ಪ, ಪಿ.ಎಂ. ನರೇಂದ್ರಸ್ವಾಮಿ, ಶಿವರಾಜ್ ತಂಗಡಗಿ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ. ಸಚಿವ ಮುನಿಯಪ್ಪ ರಾಹುಲ್ ಗಾಂಧಿ ಎದುರು ತಮ್ಮ ಖಾತೆ ಬದಲಾವಣೆಗೆ ಮನವಿ ಮಾಡಿಕೊಂಡಿದ್ದಾರೆ.

ಯಾವ ಖಾತೆ ಕೊಟ್ಟರೂ ನಿಭಾಯಿಸುವುದಾಗಿ ಜಮೀರ್, ಬಾಲಕೃಷ್ಣ ಹೇಳಿದ್ದಾರೆ. ಖಾತೆ ಹಂಚಿಕೆಗೆ ಸಮಯಾವಕಾಶವಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಹೈಕಮಾಂಡ್‌ನ ಮಧ್ಯಪ್ರವೇಶದಿಂದ ಈ ಸಮಸ್ಯೆಗೆ ಪರಿಹಾರ ಸಿಗುವ ನಿರೀಕ್ಷೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More