Cabinet Reshuffle: ಸಂಪುಟ ಪುನಾರಚನೆಗೆ ಹೈಕಮಾಂಡ್​ ಗ್ರೀನ್ ​ಸಿಗ್ನಲ್?

Updated on: Nov 16, 2025 | 9:48 PM

ಕರ್ನಾಟಕ ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಸುಮಾರು 8-12 ಸಚಿವರ ಬದಲಾವಣೆ ನಿರೀಕ್ಷಿಸಲಾಗಿದೆ. ವಿಡಿಯೋ ನೋಡಿ.

ಬೆಂಗಳೂರು, ನವೆಂಬರ್​ 15: ರಾಜ್ಯ ರಾಜಕೀಯದಲ್ಲಿ ನವೆಂಬರ್​​ ಕ್ರಾಂತಿ ಜೋರಾಗಿದೆ. ಹೀಗಿರುವಾಗ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ಈ ವೇಳೆ ಸಿಎಂ ಪ್ರಸ್ತಾಪ ಬೆನ್ನಲ್ಲೇ ಸಂಪುಟ ಪುನಾರಚನೆಗೆ ಹೈಕಮಾಂಡ್​​ ಗ್ರೀನ್​ ಸಿಗ್ನಲ್​ ನೀಡಿದೆ ಎನ್ನಲಾಗುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜತೆ ಚರ್ಚಿಸಿ ಪುನಾರಚನೆ ಮಾಡುವಂತೆ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Nov 15, 2025 05:31 PM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More