ಸದ್ಯಕ್ಕಿಲ್ಲ ಸಂಪುಟ ಸರ್ಜರಿ: ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಸೂಚನೆ ಏನು?
ರಾಜ್ಯ ಸರ್ಕಾರದ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಸದ್ಯಕ್ಕಿಲ್ಲ ಎಂದು ಎಐಸಿಸಿ ಉನ್ನತ ಮೂಲಗಳು ಖಚಿತಪಡಿಸಿವೆ. ಬೆಳಗಾವಿ ಅಧಿವೇಶನ ಮತ್ತು ಸಂಕ್ರಾಂತಿ ಹಬ್ಬದ ಬಳಿಕವಷ್ಟೇ ಈ ಬಗ್ಗೆ ಚರ್ಚೆ ನಡೆಯಲಿದೆ. ಬಿಹಾರ ಚುನಾವಣಾ ಫಲಿತಾಂಶಗಳ ಪರಾಮರ್ಶೆ ಈ ವಿಳಂಬಕ್ಕೆ ಕಾರಣ ಎನ್ನಲಾಗಿದ್ದು, ಈ ಕುರಿತು ರಾಜ್ಯ ನಾಯಕರಿಗೆ ಹೈಕಮಾಂಡ್ ಸೂಚನೆ ನೀಡಿದೆ.
ಬೆಂಗಳೂರು, ನವೆಂಬರ್ 16: ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದ ಸಚಿವ ಸಂಪುಟದ ಪುನಾರಚನೆ ಅಥವಾ ವಿಸ್ತರಣೆ ಸದ್ಯಕ್ಕೆ ನಡೆಯುವುದಿಲ್ಲ ಎಂದು ಎಐಸಿಸಿ ಉನ್ನತ ಮೂಲಗಳು ಟಿವಿ9 ಕನ್ನಡಕ್ಕೆ ತಿಳಿಸಿವೆ. ಬೆಳಗಾವಿ ಅಧಿವೇಶನ ಮುಗಿದ ನಂತರ ಮತ್ತು ಸಂಕ್ರಾಂತಿ ಹಬ್ಬದ ಬಳಿಕವಷ್ಟೇ ಈ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಕಾಂಗ್ರೆಸ್ ನಾಯಕರು ಬಿಹಾರ ಚುನಾವಣೆ ಸೋಲಿನ ಪರಾಮರ್ಶೆಯಲ್ಲಿ ನಿರತವಾಗಿರುವ ಕಾರಣ ಸದ್ಯಕ್ಕೆ ಕರ್ನಾಟಕದಲ್ಲಿ ಯಾವುದೇ ಬದಲಾವಣೆಗಳ ಬಗ್ಗೆ ಮಾತುಕತೆ ನಡೆಸದಿರಲು ನಿರ್ಧರಿಸಲಾಗಿದೆ. ರಾಜ್ಯ ನಾಯಕರಿಗೆ ಹೈಕಮಾಂಡ್‌ನಿಂದ ಈ ಬಗ್ಗೆ ಸ್ಪಷ್ಟ ಸೂಚನೆ ರವಾನಿಸಲಾಗಿದೆ ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 16, 2025 01:53 PM
Follow Us
Latest Videos
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್ಗೆ ಡಿಸಿ ಕ್ಲಾಸ್

