1 ಎಕರೆಗೆ ಗರಿಷ್ಠ 15 ನಿವೇಶನಗಳ ಪರಿಹಾರ: ನೈಸ್ ರಸ್ತೆ ವಿಚಾರದಲ್ಲಿ ಕ್ಯಾಬಿನೆಟ್ ಸಬ್ ಕಮಿಟಿಯಿಂದ ಮಹತ್ವದ ತೀರ್ಮಾ‌ನ

Edited By:

Updated on: Sep 03, 2026 | 1:39 PM

ನೈಸ್ ರಸ್ತೆಗೆ ಭೂಮಿ ಕಳೆದುಕೊಂಡ ರೈತರಿಗೆ 25 ವರ್ಷಗಳ ಬಳಿಕ ಪರಿಹಾರ ಸಿಗುವ ಸಾಧ್ಯತೆ ಇದೆ. ಸಂಪುಟ ಉಪಸಮಿತಿಯು ಡಿಸಿಎಂ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ಸಭೆ ನಡೆಸಿ, ಪ್ರತಿ ಎಕರೆಗೆ ಗರಿಷ್ಠ 15 ನಿವೇಶನಗಳನ್ನು ಪರಿಹಾರ ರೂಪದಲ್ಲಿ ನೀಡಲು ತೀರ್ಮಾನಿಸಿದೆ. ಈ ನಿರ್ಧಾರ ಅಂತಿಮ ಅನುಮೋದನೆಗಾಗಿ ಸಚಿವ ಸಂಪುಟಕ್ಕೆ ಮಂಡನೆಯಾಗಲಿದೆ.

ಬೆಂಗಳೂರು, ಸೆಪ್ಟೆಂಬರ್​​ 03: ನೈಸ್ ರಸ್ತೆ ವಿಚಾರದಲ್ಲಿ ಪರಿಹಾರ ಸಿಗದ ರೈತರಿಗೆ 1 ಎಕರೆಗೆ ಗರಿಷ್ಠ 15 ನಿವೇಶನಗಳ ಪರಿಹಾರ ನೀಡಲು ಡಿಸಿಎಂ ಡಾ.ಪರಮೇಶ್ವರ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಸಂಪುಟ ಉಪಸಮಿತಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದು ಪರಿಹಾರ ರೂಪದಲ್ಲಿ ನಿವೇಶನಗಳ ಹಂಚಿಕೆ ಮಾಡಲು ನಿರ್ಧರಿಸಲಾಗಿದ್ದು, ಕ್ಯಾಬಿನೆಟ್ ಸಬ್ ಕಮಿಟಿ ಈ ತೀರ್ಮಾನವನ್ನು ಸಂಪುಟ ಸಭೆಯ ಮುಂದೆ ಮಂಡಿಸಲಿದೆ. ನೈಸ್ ರಸ್ತೆ ಸಂಬಂಧ 25 ವರ್ಷದಿಂದ ಪರಿಹಾರ ನೀಡದ ಹಿನ್ನೆಲೆ ಹೈಕೋರ್ಟ್ ಗರಂ ಆಗಿತ್ತು. ರೈತರಿಗೆ ಪರಿಹಾರ ನೀಡದ ಕ್ರಮ ಅಮಾನವೀಯ ಎಂದಿತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More