ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ: ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್
ಇಂದಿನ ಸಚಿವ ಸಂಪುಟದಲ್ಲಿ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಬಗ್ಗೆ ಚರ್ಚೆ ಆಗಿದ್ದು, ಜನವರಿ ಮೊದಲ ವಾರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸಲು ಸಂಪುಟ ಒಲವು ತೋರಿದೆ. ಇನ್ನು ಜಿಲ್ಲಾ ಹಾಗೂ ತಾಲ್ಲೂಕ್ ಪಂಚಾಯತ್ ಚುನಾವಣೆ ಬಳಿಕ ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ಸಹ ನಿರ್ಧರಿಸಲಾಗಿದೆ.
ಬೆಂಗಳೂರು, (ಅಕ್ಟೋಬರ್ 06): ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕರ್ನಾಟಕ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ನಡೆಸಲು ಕೊನೆಗೂ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದ್ದು, ಈ ಸಂಬಂಧ ಇಂದು (ಅಕ್ಟೋಬರ್ 06) ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆಯಾಗಿದೆ.
ಹೌದು….ಇಂದಿನ ಸಚಿವ ಸಂಪುಟದಲ್ಲಿ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಬಗ್ಗೆ ಚರ್ಚೆ ಆಗಿದ್ದು, ಜನವರಿ ಮೊದಲ ವಾರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸಲು ಸಂಪುಟ ಒಲವು ತೋರಿದೆ. ಇನ್ನು ಜಿಲ್ಲಾ ಹಾಗೂ ತಾಲ್ಲೂಕ್ ಪಂಚಾಯತ್ ಚುನಾವಣೆ ಬಳಿಕ ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ಸಹ ನಿರ್ಧರಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us

