ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ: ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್

Updated on: Oct 06, 2026 | 8:30 PM

ಇಂದಿನ ಸಚಿವ ಸಂಪುಟದಲ್ಲಿ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಬಗ್ಗೆ ಚರ್ಚೆ ಆಗಿದ್ದು, ಜನವರಿ‌ ಮೊದಲ ವಾರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸಲು ಸಂಪುಟ ಒಲವು ತೋರಿದೆ. ಇನ್ನು ಜಿಲ್ಲಾ ಹಾಗೂ ತಾಲ್ಲೂಕ್ ಪಂಚಾಯತ್ ಚುನಾವಣೆ ಬಳಿಕ ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ಸಹ ನಿರ್ಧರಿಸಲಾಗಿದೆ. 

ಬೆಂಗಳೂರು, (ಅಕ್ಟೋಬರ್ 06): ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕರ್ನಾಟಕ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು  ನಡೆಸಲು ಕೊನೆಗೂ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದ್ದು, ಈ ಸಂಬಂಧ ಇಂದು (ಅಕ್ಟೋಬರ್ 06) ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆಯಾಗಿದೆ.

ಹೌದು….ಇಂದಿನ ಸಚಿವ ಸಂಪುಟದಲ್ಲಿ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಬಗ್ಗೆ ಚರ್ಚೆ ಆಗಿದ್ದು, ಜನವರಿ‌ ಮೊದಲ ವಾರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸಲು ಸಂಪುಟ ಒಲವು ತೋರಿದೆ. ಇನ್ನು ಜಿಲ್ಲಾ ಹಾಗೂ ತಾಲ್ಲೂಕ್ ಪಂಚಾಯತ್ ಚುನಾವಣೆ ಬಳಿಕ ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ಸಹ ನಿರ್ಧರಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More