ಯಾರು ಎಷ್ಟೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತೆ: ಡಿಸಿಎಂ ಡಿ.ಕೆ. ಶಿವಕುಮಾರ್

Updated on: Oct 05, 2025 | 3:01 PM

ಇಂದು (ಅ.5) ಬೆಳಿಗ್ಗೆ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, 'ಏನೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತದೆ. ಇಷ್ಟವಿದ್ದ ಪ್ರಶ್ನೆಗೆ ಉತ್ತರಿಸಿ, ಇಲ್ಲದಿದ್ದರೆ ಬೇಡ ಎಂದು ನ್ಯಾಯಾಲಯವೇ ಹೇಳಿದೆ. ಈ ಹಿಂದಿನ ಗಣತಿ ಸರಿಯಿಲ್ಲ. ಅದಕ್ಕೆ ಹೊಸದಾಗಿ ಗಣತಿ ಮಾಡಲಾಗುತ್ತಿದೆ. ಎಲ್ಲರೂ ಇದಕ್ಕೆ ಸಹಕರಿಸಬೇಕು' ಎಂದು ಮನವಿ ಮಾಡಿಕೊಂಡರು.

ಬೆಂಗಳೂರು, ಅಕ್ಟೋಬರ್ 5: ಯಾರೇ ಏನೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತದೆ. ಇಷ್ಟವಿದ್ದ ಪ್ರಶ್ನೆಗೆ ಉತ್ತರಿಸಿ, ಇಲ್ಲದಿದ್ದರೆ ಬೇಡ ಎಂದು ನ್ಯಾಯಾಲಯವೇ ಹೇಳಿದೆ. ಸಮೀಕ್ಷೆಗೆ ವಿರೋಧ ಮಾಡುವುದು ಸರಿಯಲ್ಲಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಈ ಹಿಂದಿನ ಗಣತಿ ಸರಿಯಿಲ್ಲ. ಅದಕ್ಕೆ ಹೊಸದಾಗಿ ಗಣತಿ ಮಾಡಲಾಗುತ್ತಿದೆ. ಎಲ್ಲರೂ ಇದಕ್ಕೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.