AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ವಿವಾದ: KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು

ಕಾವೇರಿ ವಿವಾದ: KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು

ದಿಲೀಪ್​, ಚೌಡಹಳ್ಳಿ
| Edited By: |

Updated on:Jul 31, 2026 | 10:31 AM

Share

ತಮಿಳುನಾಡಿಗೆ ಕಾವೇರಿ ನೀರು ಬಿಡುವ ಆದೇಶ ಖಂಡಿಸಿ ಮಂಡ್ಯದ ಕೆಆರ್‌ಎಸ್ ಜಲಾಶಯದ ಬಳಿ ಭಾರೀ ಪ್ರತಿಭಟನೆ ನಡೆಯಿತು. ಮಹಿಳಾ ಹೋರಾಟಗಾರರು ಉರುಳು ಸೇವೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಕನ್ನಡಿಗರ ರಕ್ಷಣಾ ವೇದಿಕೆ ಮತ್ತು ರೈತರು ಈ ಆದೇಶದಿಂದ ನಮ್ಮ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿ, ರಾಜ್ಯ ಸರ್ಕಾರ ತಕ್ಷಣ ಮಧ್ಯಪ್ರವೇಶಿಸುವಂತೆ ಆಗ್ರಹಿಸಿದರು.

ಮಂಡ್ಯ, ಜುಲೈ 31: ತಮಿಳುನಾಡಿಗೆ ಕಾವೇರಿ ನೀರು ಬಿಡುವ ಆದೇಶವನ್ನು ಖಂಡಿಸಿ ಮಂಡ್ಯ ಜಿಲ್ಲೆಯಲ್ಲಿ ತೀವ್ರ ಪ್ರತಿಭಟನೆಗಳು ನಡೆಯುತ್ತಿವೆ. ಕೆಆರ್‌ಎಸ್ ಜಲಾಶಯದ ಗೇಟ್ ಮುಂದೆ ಶುಕ್ರವಾರ ಬೆಳಗ್ಗೆಯೇ ಮಹಿಳಾ ಹೋರಾಟಗಾರರು ಉರುಳು ಸೇವೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಕಾವೇರಿ ನೀರು ನಿರ್ವಹಣಾ ಸಮಿತಿ (CWMA) ಮತ್ತು CWRC ನೀಡಿದ ಆದೇಶದ ವಿರುದ್ಧ ರೈತರು, ಕನ್ನಡಪರ ಸಂಘಟನೆಗಳು ತಿರುಗಿ ಬಿದ್ದಿವೆ. ಪದೇ ಪದೇ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು. ಕುಡಿಯುವ ನೀರಿಗೂ ತೊಂದರೆಯಾಗುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದು ಸರಿಯಲ್ಲ ಎಂದು ಆಗ್ರಹಿಸಿದರು.

ಮುಂಜಾನೆಯಿಂದಲೇ ಆರಂಭವಾದ ಪ್ರತಿಭಟನೆ ತಾರಕ್ಕೇರುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಕರ್ನಾಟಕ ಸರ್ಕಾರ ಸರ್ವ ಪಕ್ಷಗಳ ಸಭೆ ಕರೆದು, ರೈತರ ಹಿತ ಕಾಪಾಡಲು ಮಾಜಿ ಸಿಎಂ ಬಂಗಾರಪ್ಪ ಅವರಂತೆ ದೃಢ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು. ಈ ಅನ್ಯಾಯ ನಿಲ್ಲಬೇಕು ಮತ್ತು ರೈತರಿಗೆ ನ್ಯಾಯ ಸಿಗಬೇಕು ಎಂದು ಹೋರಾಟಗಾರರು ಆಗ್ರಹಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jul 31, 2026 10:02 AM

Follow Us
ದಿಲೀಪ್​, ಚೌಡಹಳ್ಳಿ
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More