ಕರ್ನಾಟಕದಾದ್ಯಂತ ಎಲ್ಲೆಲ್ಲೂ ಶಿವರಾತ್ರಿ ಜಾಗರಣೆ, ಪರವಶರಾದ ಭಕ್ತರು

Updated on: Feb 16, 2026 | 8:08 AM

ಕರ್ನಾಟಕದಾದ್ಯಂತ ಮಹಾಶಿವರಾತ್ರಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಬೆಂಗಳೂರು, ಮೈಸೂರು, ಮಂಗಳೂರಿನ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕಗಳು ನಡೆದವು. ಇಶಾ ಫೌಂಡೇಶನ್‌ನಲ್ಲಿ ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸಿದರು. ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಶ್ರೀ ಶ್ರೀ ರವಿಶಂಕರ್ ಗುರೂಜಿಯವರ ಸಾನಿಧ್ಯದಲ್ಲಿ ರುದ್ರಪೂಜೆ ಮತ್ತು ಐತಿಹಾಸಿಕ ಜ್ಯೋತಿರ್ಲಿಂಗ ಅವಶೇಷಗಳ ದರ್ಶನ ಲಭಿಸಿತು.

ಬೆಂಗಳೂರು, ಫೆಬ್ರವರಿ 16: ಕರ್ನಾಟಕದಾದ್ಯಂತ ಭಾನುವಾರ ರಾತ್ರಿ ಮಹಾಶಿವರಾತ್ರಿಯ ಸಡಗರ ಮತ್ತು ಸಂಭ್ರಮ ಮನೆ ಮಾಡಿತ್ತು. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಮೈಸೂರು ಮತ್ತು ಮಂಗಳೂರಿನಲ್ಲೂ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕ ಮತ್ತು ಪುಷ್ಪಾಲಂಕಾರಗಳು ಕಂಡುಬಂದವು. ಬೆಂಗಳೂರಿನ ಗವಿಗಂಗಾಧರೇಶ್ವರ ದೇಗುಲದಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜೆ ಪುನಸ್ಕಾರಗಳು ಜರುಗಿದವು.

ತಮಿಳುನಾಡಿನ ವೆಲ್ಲಿಯಂಗಿರಿ ಪರ್ವತಗಳ ತಪ್ಪಲಿನಲ್ಲಿರುವ ಇಶಾ ಫೌಂಡೇಶನ್‌ನಲ್ಲಿ ಶಿವರಾತ್ರಿ ಜಾಗರಣೆಯನ್ನು ಪ್ರತಿ ವರ್ಷದಂತೆ ಅದ್ದೂರಿಯಾಗಿ ಆಚರಿಸಲಾಯಿತು. ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದಲ್ಲಿ ಸುಮಾರು 2 ಲಕ್ಷಕ್ಕೂ ಹೆಚ್ಚು ಭಕ್ತರು ಈ ಆಚರಣೆಯಲ್ಲಿ ಭಾಗಿಯಾಗಿ, ಶಿವನ ಭಜನೆ ಮತ್ತು ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದರು.

ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಶ್ರೀ ಶ್ರೀ ರವಿಶಂಕರ್ ಗುರೂಜಿಯವರ ಸಾನಿಧ್ಯದಲ್ಲಿ ಭಕ್ತರಿಗೆ ಮೂಲ ಸೋಮನಾಥ ಜ್ಯೋತಿರ್ಲಿಂಗದ ಐತಿಹಾಸಿಕ ಅವಶೇಷಗಳ ದರ್ಶನ ಲಭ್ಯವಾಯಿತು. ಪವಿತ್ರ ರುದ್ರಪೂಜೆ ಹಾಗೂ ಶಿವನ ಮಂಗಳಕರ ರೂಪವಾದ ರುದ್ರನ ಆರಾಧನೆಯು ಈ ಸಂದರ್ಭದಲ್ಲಿ ನೆರವೇರಿತು. ಎಲ್ಲೆಡೆ ಹರ ಹರ ಮಹಾದೇವ ಘೋಷಣೆಗಳು ಮೊಳಗಿದವು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More